ಬೆಂಗಳೂರು, ಜು,03-ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.