ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ

Share

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ

by-ಕೆಂಧೂಳಿ

ಹಾಸನ,ಮಾ,01- ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವ ಮನ್ಸೂಚನೆ ಸಿಕ್ಜಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇದ್ರ ಹೇಳುದರು
ಚಿಕ್ಕಮಗಳೂರಿಗೆ ತೆರಳುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣೆಗಳು ನಡೆಯಲಿವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುನ್ಸೂಚನೆ ಅಂತೆ ಕಾಣಿಸುತ್ತಿದೆ ಎಂದರು.

ಡಿಕೆಶಿ ದಿನೇ ದಿನೇ ಬಿಜೆಪಿಗೆ ಹತ್ತಿರವಾಗುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಶಾ ಫೌಂಡೇಶನ್‌ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹ ಪಾಲ್ಗೊಂಡಿದ್ದರು ಎಂದಷ್ಟೇ ಹೇಳಿದರು. ಡಿಕೆ ಶಿವಕುಮಾರ್ ಬಿಜೆಪಿಗೆ ಬರುವುದಿಲ್ಲ ಎಂದರು.

ಬಿಜೆಪಿ ನಾಯಕರ ಒಂದು ಬಣ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಪಕ್ಷ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ಈ ರೀತಿ ಚರ್ಚಿಸುವುದು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಸಹಾಯ ಮಾಡುವ ಸರಿಯಾದ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

Girl in a jacket
error: Content is protected !!