ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ
by ಕೆಂಧೂಳಿ
ಬೆಂಗಳೂರು, ಫೆ,01-ಕೆಲ ದಿನಗಳಿಂದ ತೀವ್ರ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಅಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಳು ಅವರ ಮನಸ್ಸಿಗೆ ನೋವುಂಟುಮಾಡಿದೆ ಅಲ್ಲದೆ ತಮಗೆ ನೀಡಿರುವ ಹುದ್ದೆ ಯಾವುದೇ ಮಹತ್ವದ್ದು ಅಲ್ಲ ಎನ್ನುವ ನೋವು ಅವರನ್ನು ಕಾಡುತ್ತಿತ್ತು ಎನ್ನಲಾಗಿದ್ದು ಈಗ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಕೂಡ ಅನುಮಾನಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ ಸ್ಥಾನಮಾನವಿಲ್ಲ ಎಂದು ಕೆಲ ಹಿರಿಯ ಶಾಸಕರು ಅಸಮಾಧಾನಗೊಂಡಿದ್ದರು. ಆರ್‌ವಿ ದೇಶಪಾಂಡೆ, ಬಸವರಾಜ್ ರಾಯರೆಡ್ಡಿ ಹಾಗೂ ಬಿಆರ್ ಪಾಟೀಲ್ ಸಹ ಬೇಸರಗೊಂಡಿದ್ದರು. ಹೀಗಾಗಿ ಬಂಡಾಯ ಎದ್ದಿದ್ದ ಶಾಸಕರಿಗೆ ವಿಶೇಷ ಹುದ್ದೆಗಳ ಸ್ಥಾನ ಮಾನ ನೀಡಲಾಗಿತ್ತು.
ಬಸವರಾಜ ರಾಯರೆಡ್ಡಿ ಅವರಿಗೆ ಸಿಎಂ ಆರ್ಥಿಕ ಹುದ್ದೆ, ಬಿಆರ್ ಪಾಟೀಲ್ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಹಾಗೇ ಆರ್‌ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು, ಆದ್ರೆ, ಇದೀಗ ಬಿಆರ್ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಆಳಂದ ಕಾಂಗ್ರೆಸ್ ಶಾಸಕ ಮತ್ತೆ ಸ್ವಪಕ್ಷ ಮತ್ತು ಸರ್ಕಾರ ಆಡಳಿತ ವಿರುದ್ಧ ಸಿಡಿದೆದ್ದಿದ್ದರು. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು. ಶಾಸಕ ಬಿ.ಆರ್. ಪಾಟೀಲ್ ಅವರು ಬಹಿರಂಗವಾಗಿಯೇ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸಿಡಿದೆದ್ದಿದ್ದರು. ಅಲ್ಲದೇ ಈ ಸಂಬಂಧ ನೇರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದ್ದರು.