ಹಾಸನ,ಜೂ,೧೧:ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ ಆದರೂ ಬಡವರಿಗೆ ಅನಕೂಲವಾಗಬೇಕು ಎಂಬ ಕಾಣರಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶುಕ್ರವಾರ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್‌ಪೋರ್ಟ್ ಕೆಲಸ ಆರಂಭಿಸಲಾಗುವುದು.ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ. ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೋವಿಡ್‌ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ ಶಾಸಕ ಎಚ್.ಡಿ ರೇವಣ್ಣ ಹೇಳಿಕೆಗೆ ಕಿಡಿಕಾರಿದ ಮುಖ್ಯಮಂತ್ರಿ, ಜವಾಬ್ದಾರಿಯುತ ಶಾಸಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅವರು ಸಹ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ನಿರ್ವಹಿಸದೆ ಬೇರೆಯವರ ಬಗ್ಗೆ ಬೆಟ್ಟು ತೋರಿಸಬಾರದು ಎಂದರು ಮೂರನೆ ಅಲೆಯಲ್ಲಿ ಯಾವುದೇ ಅನಾಹುತ ಆಗದಂತೆ ಸಿದ್ಧತೆ ಮಾಡುತ್ತಿದ್ದೇವೆ. ಕೋವಿಡ್ ಬಗ್ಗೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬ ವಿರೋಧ ಪಕ್ಷದವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸುಳ್ಳು ಲೆಕ್ಕ ಕೊಡುತ್ತೇವೆ ಅಂದಿದ್ದು ಯಾರು..? ಅದರಿಂದ ನಮಗೇನು ಲಾಭ ಎಂದು ಪ್ರಶ್ನಿಸಿದರು.ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಕಾನೂನು ಅದರದೆ ಆದ ಕ್ರಮ ಕೈಗೊಳ್ಳುತ್ತದೆ.ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಉತ್ತರಿಸಿದರುಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆ ನಡೆಸುತ್ತಿದ್ದಾರೆ
ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ-ಸಿಎಂ
Share