ಆಶಾಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ

Share

ಬೆಂಗಳೂರು, ಮೇ ೧೭-ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಶಾಕಾರ್ಯಕರ್ತೆಯರಿಗೆ ನೀಡಲಾಗಿದ್ದ ಭರವಸೆಯನ್ನು ಗೌರವಧನವನ್ನು ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ೨೦೨೫-೨೬ ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ ೧೪೮ ರಲ್ಲಿ ” ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು ೧೦೦೦ ರೂ. ಹೆಚ್ಚಿಸಲಾಗುವುದು ಎಂದು ಘೋಷಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ೧೦೦೦ ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ ೨೫೦೦ ಜನಸಂಖ್ಯೆಗೆ ಒಬ್ಬರಂತೆ ಆಶಾಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು, ಇದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ೪೨,೫೨೪ ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ ೪೧೦೦೦ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆಯುಷ್ಮಾನ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮತ್ತು ಸಾಮೂಹಿಕ ನೆಲೆಗಟ್ಟಿನ ಕಾರ್ಯನಿರ್ವಹಣೆಯನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ತಂಡ ಆಧಾರಿತ ಪ್ರೋತ್ಸಾಹಧನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರ ಸ್ನಾನದ ಆರೋಗ್ಯ ಉಪಕೇಂದ್ರಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ೧೫೦೦೪ ಆಶಾಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಂಡ ಆಧಾರಿತ ಪ್ರೋತ್ಸಾಹ ಧನವು  ಅನುಮೋದನೆಯಾಗಿರುವುದಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಮಾಸಿಕ ರೂ. ೧೦೦೦- ಗಳಂತೆ ಪ್ರೋತ್ಸಾಹಧನವನ್ನು ನೀಡಲು ಜo.೧೮೦೦.೪೮ ಲಕ್ಷಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಲೆಕ್ಷ ಶೀರ್ಷಿಕೆ ೨೨೧೧-೦೦-೧೦೩-೦-೧೧ ಉಪಲೆಕ್ಕಶೀರ್ಷಿಕೆ ೩೨೪ ಅಡಿಯಲ್ಲಿ ಒದಗಿಸಲಾದ ಅನುದಾನದಿಂದ ಭರಿಸಲು ಅನುಮೋದನೆ ನೀಡುವಂತೆ ಕೋರಲಾಗಿದೆ.

Girl in a jacket
error: Content is protected !!