ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ

Share

ಬೆಳಗಾವಿ ಏ 20-ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು.

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು.

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

Girl in a jacket
error: Content is protected !!