ನಾಯಕನಹಟ್ಟಿ ಜಾತ್ರೆ,ಅಗತ್ಯ ಮೂಲಭೂತ ವ್ಯವಸ್ಥೆ ಕಲ್ಪಿಸಲು ಸಚಿವರ ಸೂಚನೆ

Share

ನಾಯಕನಹಟ್ಟಿ ಜಾತ್ರೆ,ಅಗತ್ಯ ಮೂಲಭೂತ ವ್ಯವಸ್ಥೆ ಕಲ್ಪಿಸಲು ಸಚಿವರ ಸೀಚನೆ

ವರದಿ:- ಆಂಜನೇಯ ನಾಯಕನಹಟ್ಟಿ…

ನಾಯಕನಹಟ್ಟಿ,ಫೆ,19- ಮಧ್ಯ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಶ್ರೀಗುರು ತಿಪ್ಪೇರುದ್ರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣದಲ್ಲಿ  ಹಮ್ಮಿಕೊಂಡಿದ್ದ 2025 ನೇ ಸಾಲಿನ ಜಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಪೂರ್ವಸಿದ್ಧತಾ ಸಭೆಯಲ್ಲಿ ಸಚಿವ ಡಿ.ಸುಧಾಕರ್ ಸೂಚನೆ ಐತಿಹಾಸಿಕ ಮಧ್ಯಕರ್ನಾಟಕದ ಪವಾಡ ಪುರುಷ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಬರುವಂತಹ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಿ ಮತ್ತು ಭಕ್ತಾಧಿಗಳಿಗೆ ಶುದ್ಧವಾದ ನೀರು ಕೊಡಬೇಕು. ಕುಡಿಯುವ ನೀರಿಗೆ ರಾಜಿ ಇಲ್ಲ ಸರಿಯಾದ ನೀರು ಕೊಡದೇ ಹೋದರೆ ಪಟ್ಟಣ ಪಂಚಾಯಿತಿ ನೇರ ಹೊಣೆ ಎಂದು ಮುಖ್ಯಾಧಿಕಾರಿ ಓ.ಶ್ರೀನಿವಾಸ್‌ರವರಿಗೆ ಎಚ್ಚರಿಕೆ ನೀಡಿದರು.

ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಒಂದು ವಾರದೊಳಗೆ ಐದು ಕೊಳವೆಬಾವಿಗಳನ್ನು ಕೊರೆಯಿಸಿ, ಸಮರ್ಪಕವಾಗಿ ಕುಡಿಯವ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯು ವ್ಯವಸ್ಥಿತವಾಗಿ, ಸುಸೂತ್ರವಾಗಿ ನಡೆಯಬೇಕು ಎಂದು ಹೇಳಿದರು.
ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವವು 2025 ರ ಮಾರ್ಚ್ 09 ರಿಂದ ಮಾರ್ಚ್ 24 ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವವು ಮಾರ್ಚ್ 16ರಂದು ಭಾನುವಾರ ನಿಗಧಿಯಾಗಿದೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲಸೌಲಭ್ಯಗಳ ಕೊರತೆ ಎದುರಾಗಬಾರದು. ಕುಡಿಯುವ ನೀರು, ರಸ್ತೆ, ಆರೋಗ್ಯ, ನೈರ್ಮಲ್ಯ ಸೇರಿದಂತೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮತನಾಡಿ, ನಾಯಕನಹಟ್ಟಿ ಜಾತ್ರಾ ಮಹೋತ್ಸವಕ್ಕೆ ಸುಮಾರು 3ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಜಾತ್ರೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಉಪಸಮಿತಿಗಳನ್ನು ರಚನೆ ಮಾಡಲಾಗುವುದು. ಕಳೆದ ವರ್ಷದ ಸಣ್ಣಪುಟ್ಟ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಜಾತ್ರೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ ಅವರು, ಕುಡಿಯುವ ನೀರು, ಆರೋಗ್ಯ, ನೈರ್ಮಲ್ಯ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ರಚನೆ ಮಾಡಲಾಗುವುದು ಎಂದು ಹೇಳಿದರು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ, ನೈರ್ಮಲೀಕರಣ ಸಮಿತಿ ರಚನೆ ಮಾಡಿ, ಜಾತ್ರೆಯಲ್ಲಿ ತಾತ್ಕಾಲಿಕ ಅರೋಗ್ಯ ಕೇಂದ್ರಗಳ ಸ್ಥಾಪನೆ, ಅಂಬುಲೆನ್ಸ್, ಔಷಧೋಪಚಾರದ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರ ಆರೋಗ್ಯ ಕಾಡಾಪಲು ತಾತ್ಕಾಲಿಕವಾಗಿ ವೈದ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಾತ್ರೆಗೆ ವಿವಿಧ ಜಿಲ್ಲೆ, ತಾಲ್ಲೂಕುಗಳಿಂದಲೂ ಭಕ್ತಾದಿಗಳು ನಾಯಕನಹಟ್ಟಿಗೆ ಬರುವುದರಿಂದ, ಕೆಎಸ್ರ‍್ಟಿಸಿ ವತಿಯಿಂದ ವಿಶೇಷ ಬಸ್ ಸೌಲಭ್ಯ ಒದಗಿಸಬೇಕು. ಬಸ್ ತಂಗುದಾಣ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸಮರ್ಪಕವಾಗಿರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
.
ಕರವಸೂಲಿಗೆ ಸಮಿತಿ ರಚನೆ:

ಕಳೆದ ಬಾರಿ ತೀವ್ರ ಬರ ಪರಿಸ್ಥಿತಿ ಇದ್ದ ಕಾರಣ, ಜಾತ್ರೆ ಸಂದರ್ಭದಲ್ಲಿ ಕರ ವಸೂಲಿ ಮಾಡದಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಈ ಬಾರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯಲ್ಲಿ ಕರ ವಸೂಲಿಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲು ಸಮಿತಿ ರಚನೆ ಮಾಡಿ, ಸಮಿತಿ ನೀಡುವ ವರದಿಯ ಆಧಾರದಲ್ಲಿ ಕರವಸೂಲಿಗೆ ದರ ನಿಗದಿಪಡಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಟೇಶ್ ತಿಳಿಸಿದರು.
ಅಕ್ರಮವಾಗಿ ಬೇರೆ ಯಾರಾದರೂ ಕಂದಾಯ ವಸೂಲಾತಿ ಮಾಡಿದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮೊಳಕಾಲ್ಮುರು ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ನಾಯಕನಹಟ್ಟಿ ಜಾತ್ರಾ ಮಹೋತ್ಸವಕ್ಕೆ ಶಾಸಕರ ಅನುದಾನದಿಂದ ರೂ.10 ಲಕ್ಷ ಅನುದಾನ ನೀಡಲಾಗುವುದು.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಜಾತ್ರಾ ಮಹೋತ್ಸವದ ಅಂಗವಾಗಿ ನಾಯಕನಹಟ್ಟಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳ ಗುಂಡಿ ಮುಚ್ಚಿಸಿ, ರಸ್ತೆ ದುರಸ್ಥಿಗೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್, ಉಪಾಧ್ಯಕ್ಷೆ ಸರ್ವಮಂಗಳಾ, ಪ.ಪಂ. ಸರ್ವ ಸದಸ್ಯರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ, ಮಾಜಿ ಅಧ್ಯಕ್ಷ ರವಿಶಂಕರ್, ಎಂ.ವೈ.ಟಿ.ಸ್ವಾಮಿ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಯ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು

Girl in a jacket
error: Content is protected !!