ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಕನ್ನಡ ಪರ ಸಂಘಟನೆಗಳು

Share

ಬೆಂಗಳೂರು,ಜೂ,18:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ. ಸಂತೋಷ ಹಾನಗಲ್ ಅವರನ್ನು ಕನ್ನಡಪರ ಸಂಘಟನೆಗಳು ಅವರ ಕಛೇರಿಯಲ್ಲಿ ಅಭಿನಂದಿಸಿದವು.
ಕನ್ನಡ ಶ್ರೀಸಾಮಾನ್ಯರ ಕೂಟದ ಅಧ್ಯಕ್ಷ ಶ್ರ.ದೇ. ಪಾರ್ಶ್ವನಾಥ್, ಮಹಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾಖಾನ್, ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ, ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ಸದ್ಭಾವನ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶಮೂರ್ತಿ, ಕರ್ನಾಟಕ ವಿದ್ಯಾರ್ಥಿಕೂಟದ ಪ್ರಧಾನ ಕಾರ್ಯದರ್ಶಿ ಹರ್ಷ, ವಿಷ್ಣುಸೇನೆಯ ಆನಂದ್ ಮತ್ತಿತರರು ನೂತನ‌ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ ಅವರನ್ನು ಅಭಿನಂದಿಸಿ ಕನ್ನಡದ ಕೆಲಸಗಳು ಮತ್ತಷ್ಟು ನಡೆಯಲೆಂದು ಆಶಿಸಿದರು
ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಡಾ. ಸಂತೋಷ ಹಾನಗಲ್ ಕನ್ನಡದ ಕೆಲಸದಲ್ಲಿ ಎಲ್ಲರ ಸಹಕಾರ ಕೋರಿದರು. ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳೊಂದಿಗೆ ಮತ್ತಷ್ಟು ಯೋಜನೆಗಳೊಂದಿಗೆ ಅಖಂಡ ಕರ್ನಾಟಕದಲ್ಲಿ ಪ್ರಾಧಿಕಾರದ ಅಧ್ಯಕ್ಷರ ಬೆಂಬಲದೊಂದಿಗೆ ಕನ್ನಡದ ಕಾರ್ಯವನ್ನು ನಡೆಸುವುದಾಗಿ ತಿಳಿಸಿದರು.

Girl in a jacket
error: Content is protected !!