ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

Share

 

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ನಗರದ ವಿವಿಧೆಡೆ ತೆರಳಿ 200ಕ್ಕೂ ಹೆಚ್ಚು ಮಹಿಳೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಯಿತು. ಅದರಲ್ಲೂ ರಕ್ತ ಪರೀಕ್ಷೆ, ವಿಟಮಿನ್ ಡಿ,ಫಾಲಿಕ್ ಆಸಿಡ್, ಬಿ12 ಸೇರಿದಂತೆ ಇತರೆ ಪರೀಕ್ಷೆ ಮಾಡಲಾಯಿತು.
ಇದಲ್ಲದೆ, ಎಲ್ಲಾ ಮಹಿಳೆಯರಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಬಹುತೇಕ ಮಹಿಳೆಯರು ಪಿಸಿಓಡಿ ಹಾಗೂ ಋತುಚಕ್ರದ ಸಮಸ್ಯೆ ಎದುರಿಸುತ್ತಿದ್ದರು. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.ಜೊತೆಗೆ ವಿಟಮಿನ್ ಕೊರತೆ ಎದುರಿಸುತ್ತಿರುವವರಿಗೆ ವಿಟಮಿನ್ ಹಾಗೂ ಮಿನರಲ್ಸ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಯಿತು ಎಂದರು.

Girl in a jacket
error: Content is protected !!