ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಬೊಮ್ಮಾಯಿ

Share

ಬೆಂಗಳೂರು,ಜ,೧೧: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯರ ಸಲಹೆ ಮೇರೆಗೆ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ..

ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ಸೋಮವಾರಸಿಎಂಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಬೊಮ್ಮಾಯಿ ಮಗ ಮತ್ತು ಸೊಸೆಗೂ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಸಿಎಂ ತೆರಳಿದ್ದಾರೆ.
ಈ ಹಿಂದೆ ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಎರಡೂ ಬಾರಿಯೂ ಅಂದು ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಎರಡೂ ಬಾರಿಯೂ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದಲೇ ಕಡತ ವಿಲೇವಾರಿ, ವರ್ಚುಯಲ್ ಮೀಟಿಂಗ್ ಸೇರಿದಂತೆ ಕರ್ತವ್ಯ ನಿರ್ವಹಣೆ ಮಾಡಿ ಗಮನ ಸೆಳೆದಿದ್ದನ್ನು, ಇಲ್ಲಿ ಸ್ಮರಿಸಬಹುದು.

Girl in a jacket
error: Content is protected !!