ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ

Share

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಸಿಎಂ

by ಕೆಂಧೂಳಿ

ಬೆಂಗಳೂರು, ಜ, 30- ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನವರಿ 30 , 1948 ರಂದು ಮತಾಂಧನಾಗಿದ್ದ ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ಇಹಲೋಕವನ್ನು ತ್ಯಜಿಸಿದ್ದರೂ, ಅವರ ಮೌಲ್ಯಗಳನ್ನು ಕೊನೆಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸತ್ಯ, ಅಸಿಂಹೆಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ವ್ಯಕ್ತಿ. ಅಹಿಂಸಾ ಹೋರಾಟದ ನಾಯಕತ್ವ ವಹಿಸಿದ್ದರು. ಅವರು ಮೊದಲು ಭಾರತಕ್ಕೆ ಬಂದು ತಳಮಟ್ಟದಿಂದ ದೇಶವನ್ನು ಅರಿಯಲು ಪ್ರಯತ್ನಿಸಿ, ನಂತರ ದೇಶದ ಜನರನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸಿದರು ಎಂದರು.

1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಜನವರಿ 21 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಿ, ನಂತರ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷವಾಕ್ಯದೊಂದಿಗೆ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು. ಭಾರತ ದೇಶ ಹಳ್ಳಿಗಳ ದೇಶ, ಹಳ್ಳಿಗಳ ಅಭಿವೃದ್ಧಿಗಳ ಮೂಲಕ ದೇಶ ಅಭಿವೃದ್ಧಿ ಸಾಧ್ಯವೆಂದು ಪ್ರತಿಪಾದಿಸಿದ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಜೀವ ತುಂಬಿದ್ದರು. ಗ್ರಾಮಗಳ ಸ್ವಾವಲಂಬನೆಯಿಂದ , ದೇಶ ಸ್ವಾವಲಂಬನೆಯಾಗುತ್ತದೆ. ಗುಡಿಕೈಗಾರಿಕೆಗಳು ಗ್ರಾಮಗಳ ಆರ್ಥಿಕತೆಯ ತಳಹದಿಯಾಗಿದ್ದು, ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಈ ನಿಟ್ಟಿನಲ್ಲಿ ಗಾಂಧಿ ಭಾರತ ವನ್ನು ನಿರ್ಮಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

 

Girl in a jacket
error: Content is protected !!