ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಕೋವಿಡ್ ಗೆ ಬಲಿ

Share

ಬೆಂಗಳೂರು, ಮೇ,14: ಹಿರಿಯ ಪತ್ರಕರ್ತ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಕಾರ್ಯದರ್ಶಿ ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ್ ಕೋವಿಡ್ ಗೆ ಬಲಿಯಾಗಿದ್ದಾರೆ.
ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ತಗುಲಿದ ಕಾರಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ.
65 ವರ್ಷದ ಮಹಾದೇವ್ ಪ್ರಕಾಶ್ 1975 ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮ ಆರಂಭಿಸಿದ್ದ ಅವರು ನಂತರ ತಮ್ಮದೆ ಸಂಪಾದಕತ್ವದ ‘ಈ ಭಾನುವಾರ ‘ಪತ್ರಿಕೆ ತರುತ್ತಿದ್ದರು ಅಲ್ಲದೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆ ಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು ಕಾರಣಾಂತರಗಳಿಂದ ರಾಜೀನಾಮೆ ನೀಡಿದ್ದರು.

ಮಹಾದೇವ್ ಪ್ರಕಾಶ್ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ,ಲಕ್ಷ್ಮಣ ಸವದಿ,ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ

Girl in a jacket
error: Content is protected !!