ಹೋಂ ಐಸೋಲೇಷನ್ ಇಲ್ಲ, ಕೋವಿಡ್ ಕೇಂದ್ರಕ್ಕೆ ದಾಖಲು ಕಡ್ಡಾಯ: ಸುಧಾಕರ್

Share

ದಾವಣಗೆರೆ,ಮೇ,೨೨: ಇನ್ನೂ ಮುಂದೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ಕಡ್ಡಾಯವಾಗಿ ಕೋವಿಡ್ ಕೇಂದ್ರಕ್ಕೆ ದಾಖಲಾಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಹೋಂ ಐಸೋಲೇಷನ್‌ಗೊಳಗಾದ ಕೋವಿಡ್ ಸೋಂಕಿತರಿಂದಲೇ ಇತರರಿಗೂ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ದಾವಣಗೆರೆ ನಗರದಲ್ಲಿ ಶುಕ್ರವಾರ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಹೋಂ ಐಸೋಲೇಷನ್‌ಗಳಗಾದ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ,ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲೇ ದಾಖಲು ಮಾಡಬೇಕು ಎಂದು ಡಾ.ಕೆ.ಸುಧಾಕರ್ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.
ಕೋವಿಡ್ ಸೋಂಕಿತರಿಗೆ ಇನ್ನು ಹೋಂ ಐಸೋಲೇಷನ್ ಇಲ್ಲ. ನೇರವಾಗಿ ಅಂತಹವರನ್ನು ಕೋವಿಡ್ ಕೇರ್ ಸೆಂಟರ್‌ನಲ್ಲಿ ದಾಖಲಿಸಬೇಕು. ಹೀಗೆ ಮಾಡುವುದರಿಂದ ಇತರರಿಗೂ ಸೋಂಕು ಹರಡುವುದನ್ನು ತಡೆಯಬಹುದು ಎಂದರು. ಉತ್ತಮ ಸೌಲಭ್ಯವಿರುವ ಹಾಸ್ಟೆಲ್, ಸರ್ಕಾರಿ-ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡು ಬಂದಿದ್ದು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಅಗತ್ಯವಿರುವ ಔಷಧಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಯಾರೂ ಸಹ ಆತಂಕ ಪಡುವ ಪ್ರಮೇಯವಾಗಲೀ, ಅಗತ್ಯವಾಗಲೀ ಇಲ್ಲ ಎಂದು ಸುಧಾಕರ್ ತಿಳಿಸಿದರು.

Girl in a jacket
error: Content is protected !!