ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ

Share

ನಬಾರ್ಡ್ ಅನುದಾನ ಹೆಚ್ಚಿಸುವಂತೆ ನಿರ್ಮಲಾ ಸೀತರಾಮನ್‌ಗೆ ಕಾಂಗ್ರೆಸ್ ಸಂಸದರ ಮನವಿ
  by-ಕೆಂಧೂಳಿ
ನವದೆಹಲಿ,ಫೆ,೦೫- ರೈತರ ಅನುಕೂಲಕ್ಕಾಗಿ ಬೆಳೆ ಸಾಲ ವಿತರಣೆಗೆ ನಬಾಡ ಅನುದಾನ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ಸಂಸದರು ವಿತ್ತ ಸಚಿವೆ ನಿರ್ಮಲ ಸಈತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ
ಮಂಗಳವಾರ ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ, ಶ್ರೇಯಸ್ ಎಂ. ಪಟೇಲ್, ಪ್ರಿಯಾಂಕಾ ಜಾರಕಿಹೊಳಿ, ಸಾಗರ್ ಖಂಡ್ರೆ, ಸುನೀಲ್ ಬೋಸ್ ಅವರು ಮನವಿ ಪತ್ರ ಸಲ್ಲಿಸಿದ್ದಾರೆ
ಈ ಮನವಿಯಲ್ಲಿ ‘ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ಕರ್ನಾಟಕಕ್ಕೆ ಒದಗಿಸಿರುವ ನೆರವು ಕಡಿತಗೊಳಿಸಿರುವುದರಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ತುರ್ತು ಗಮನ ಹರಿಸಬೇಕು’ ಎನ್ನುವುದನ್ನು ಉಲ್ಲೇಖಿಸಿದ್ದಾರೆ

Adavategement

‘೨೦೨೪-೨೫ರ ಕೃಷಿ ಸಾಲಕ್ಕಾಗಿ ೯,೧೬೨ ಕೋಟಿ ಅನುದಾನ ನೀಡುವಂತೆ ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು ಆದರೆ, ನಬಾರ್ಡ್ ೨,೩೪೦ ಕೋಟಿ ಮಾತ್ರ ಮಂಜೂರು ಮಾಡಿದೆ. ಇದು ಕಳೆದ ವರ್ಷಕ್ಕಿಂತ ಶೇ ೫೮ರಷ್ಟು ಕಡಿಮೆ ಇದರಿಂದಾಗಿ,ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಲ್ಲದೇ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಸಾಲಮಿತಿಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಬಾರ್ಡ್ ಮತ್ತು ಆರ್‌ಬಿಐಗೆ ಸೂಚಿಸಬೇಕು’ ಎಂದು ಸಂಸದರು ಮನವಿ ಮಾಡಿದರು.ಎಲ್‌ಐಸಿ ಹಾಗೂ ಜೀವವಿಮಾ ಪ್ರತಿನಿಧಿಗಳ ಭವಿಷ್ಯಕ್ಕೆ ಮಾರಕವಾಗುವ ತಿದ್ದುಪಡಿಯಿಂದ ಪ್ರತಿನಿಧಿಗಳಿಗೆ ತೊಂದರೆಯಾಗಲಿದೆ. ವಿಮಾ ಸೆಕ್ಷನ್ ೪೨(೨) ತಿದ್ದುಪಡಿ ಪ್ರಸ್ತಾವನೆಯಂತೆ ಏಜೆಂಟ್‌ಗಳಿಗೆ ಬಹು ವಿಮಾ ಕಂಪನಿಗಳೊಂದಿಗೆ ಕೆಲಸ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದು ಸಾರ್ವಜನಿಕ ಸಂಸ್ಥೆಯಾದ ಎಲ್‌ಐಸಿಯ ಸ್ಥಿರತೆಯನ್ನು ಹಾಳು ಮಾಡುವ ಜೊತೆಗೆ, ಲಕ್ಷಾಂತರ ಏಜೆಂಟ್‌ಗಳ ಉದ್ಯೋಗ ಭದ್ರತೆಗೆ ಹಾಗೂ ಗ್ರಾಹಕರ ವಿಶ್ವಾಸಕ್ಕೆ ಆಘಾತ ತರುವಂತಿದೆ’ ಎಂದು ಅವರು ಸಚಿವರ ಗಮನಕ್ಕೆ ತಂದರು.

Girl in a jacket
error: Content is protected !!