ನಮ್ಮ ಕೊನೆ ಉಸಿರಿರುವರೆಗೂ ಮಂಡ್ಯ ಜನರ ಸೇವೆ ಮಾಡುತ್ತೇವೆ- ನಿಖಿಲ್ ಕುಮಾರಸ್ವಾಮಿ

Share

ಮದ್ದೂರು,ಜೂ,30- ಪೆನ್ನು ಪೇಪರ್ ನಾಯಕರೇ ನಿಮ್ದು ಏನೇ ರಾಜಕಾರಣ ಇದ್ದರು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು.

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ. ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರೋವರೆಗೂ ಹಣ ಹಾಕಲ್ಲ ಎಂದು ನಿಖಿಲ್ ಅವರು ಆರೋಪಿಸಿದರು.

ಸರ್ಕಾರದ ಗ್ಯಾರಂಟಿಗಳನ್ನ ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ ತಿಂಗಳು ತಿಂಗಳು ಗ್ಯಾರಂಟಿ ಹಣ ಕೊಡ್ತೀನಿ ಅಂತ ಅವರ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದ್ರು ಆದರೆ ಮಾತು ತಪ್ಪಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೂರು ಉಪ ಚುನಾವಣೆ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಮಾತ್ರ ಒಂದೇ ಸಲ ನಾಲ್ಕು ತಿಂಗಳು ಹಣ ಜಮೆ ಅಯ್ತು. ಈಗ ಮುಂದೆ ತಾ.ಪಂ ಹಾಗೂ ಜಿ.ಪಂ ಚುನಾವಣೆ ಬರೋವರೆಗೂ ಜನ ಕಾಯಬೇಕು. ಕಾಂಗ್ರೆಸ್ ಅವರಿಗೆ ನಾಲಿಗೆ ಮೇಲೆ ಭಧ್ಧರಿಲ್ಲ ಎಂದು ಅವರು ಕಿಡಿಕಾರಿದರು.

ರಾಮನಗರದಲ್ಲಿ ಪೆನ್ನು ಪೇಪರ್ ನಾಯಕರು ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆ ಮಾಡಿದ್ರು. ಅಲ್ಲಿ ಕ್ಷೇತ್ರದ ಹೆಣ್ಣು ಮಕ್ಕಳಿಗೆ ನನ್ನ ತಮ್ಮನಿಗೆ ಮತ ಹಾಕಿಲ್ಲ ಅಂದ್ರೆ ನಮ್ಮೆಲ್ಲ ಕಾರ್ಯಕ್ರಮಗಳನ್ನ ನಿಲ್ಲುಸುತ್ತೇವೆ ಎಂದು ಧಮ್ಕಿ ಹಾಕ್ತಾರೆ. ಈಗ ಸೋತು ಮನೆಯ್ಲಲಿ ಕೂತಿದ್ದಾರೆ ಎಂದು ಡಿಸಿಎಂ ವಿರುದ್ಧ ನಿಖಿಲ್ ಅವರು ವಾಗ್ದಾಳಿ ನಡೆಸಿದರು.

ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರ. ಇಲ್ಲಿ ಎಲ್ಲಾ ಸಮುದಾಯದವರು ಇದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರು ಹೆಚ್ಚು ಇರುವಂತಹ ಕ್ಷೇತ್ರ. ಮುಂದಿನ ಚುನಾವಣೆಯಲ್ಲಿ ಅನ್ನದಾನಿ ಅವರನ್ನ ಶಾಸಕರಾಗಿ ಮಾಡುವುದಕ್ಕೆ ನಾನೆಲ್ಲ ಸಹಕಾರ ಇರುತ್ತೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷದ ನಾಯಕರು ಸೋತಿರಬಹುದು ಸತ್ತಿಲ್ಲ. ಅನ್ನದಾನಿಯವರು ಸೋತಿರಬಹುದು ಆದರೆ ಮನೆ ಸೇರಿಕೊಂಡಿಲ್ಲ. ಮುಂದಿನ ಚುನಾವಣೆಯಲ್ಲಿ ತೋರಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ತಲೆಬಾಗಲೇಬೇಕು. ಗೆಲುವು ಸೋಲು ಸರ್ವೇ ಸಾಮಾನ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಾ.ಕೆ ಅನ್ನದಾನಿ ಅವರು, ಸುರೇಶ್ ಗೌಡ ಅವರು,ರಾಜ್ಯದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜಯರಾಮಣ್ಣ ಅವರು, ಬಿ. ಆರ್ ರಾಮಚಂದ್ರು ಅವರು, ಜಿಲ್ಲಾಧ್ಯಕ್ಷರಾದ ಶ್ರೀ ಡಿ. ರಮೇಶ್ ಅವರು, ಶ್ರೀ ವಿಶ್ವನಾಥ್, ರವಿ ಕಂಸಾಗರ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

 

Girl in a jacket
error: Content is protected !!