ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ

Share

ಬೆಂಗಳೂರು, ಮೇ 21: ಕೊರೊನಾ ಸೋಂಕಿತ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 14 ಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಲಾಗಿದೆ.

ಸುದ್ದಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತಜ್ಞರ ನೀಡಿರುವ ಮಾಹಿತಿ ಆದರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದ ಅವರು,
ಲಾಕ್‌ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ ಎಂದರು.

ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದರು.
ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಿದ್ದಾಪುರ, ಶಿರಸಿ, ಯಲ್ಲಾಪುರ, ಮುಂಡಗೋಡು ತಾಲೂಕುಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಸಾಕಷ್ಟು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದೆ.

ಬೆಳಗ್ಗೆ 10 ಕಳೆದರೂ ವಾಹನಗಳಲ್ಲಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಬೆಳಗ್ಗೆ 9.45ರೊಳಗೆ ಜನರು ತಮ್ಮ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜತೆಗೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ನಿರ್ಧರಿಸಿಲ್ಲ ಎಂದು ಸಹ ಅವರು ಮಾಹಿತಿ ನೀಡಿದರು.

ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.

Girl in a jacket
error: Content is protected !!