ಬೆಂಗಳೂರು ,ಮೇ 31:ಕೇರಳಕ್ಕೆ ಜೂನ್ 3 ರಿಂದ ಮುಂಗಾರು ತಡವಾಗಿ ಪ್ರವೇಶಲಿದ್ದು,ಇದರ ಪರಿಣಾಮ ನಾಳೆ ರಾಜ್ಯದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ .