ಬೆಂಗಳೂರು,ಜೂ,04:
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೊಂಕಿತರ ಪ್ರಕರಣಗಳು ಇಳಿಮುಖವಾಗುತ್ತಿವೆ .ಇಂದು 16,068 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 364 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 30,895ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 3,221 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,77,496ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 206 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 22,316 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.