ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

Share

ಆಪ್ ಸೋಲು- ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

   by-ಕೆಂಧೂಳಿ
ನವದೆಹಲಿ,ಫೆ,೦೯-ದೆಹಲಿಯಲ್ಲಿ ಎಎಪಿ ಹೀನಾಯ ಸೋಲು ಕಾಣುತ್ತಿದ್ದಂತೆ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ
ಕೇಜ್ರಿವಾಲ ಜೈಲಿಗೆ ಹೋಗಿ ಬಂದ ನಂತರ ತಾವು ರಾಜೀನಾಮೆ ನೀಡಿ ಆ ಸ್ಥಾನದಲ್ಲಿ ಅತಿಶಿಯನ್ನು ಕೂರಿಸಿದ್ದರು ಈ ವೇಳೆ ದೆಹಲಿ ವಿಧಾನಸಭೆ ಚುನಾವಣೆಯೂ ಬಂದ ಕಾರಣ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡಿದೆ,
ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು ದಿನದ ನಂತರ ಅಶಿತಿ, ರಾಜ್ಯಪಾಲ ವಿ.ಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಮಾಜಿ ಸಿಎಂ ಕೇಜ್ರಿವಾಲ್ ಸೇರಿದಂತೆ ಘಟಾನುಘಟಿ ನಾಯಕರೇ ಸೋತು ಸುಣ್ಣವಾದ ಹೊರತಾಗಿಯೂ ಅತಿಶಿ ತನ್ನ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡರು.
ಕಲ್ಕಾಜಿ ಕ್ಷೇತ್ರದಲ್ಲಿ ಆಪ್ ಅಭ್ಯರ್ಥಿ ಅತಿಶಿ ೫೨,೧೫೪ ಮತಗಳನ್ನು ಪಡೆದು ೩,೫೨೧ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಬಿಧೂರಿ ೪೮,೬೩೩ ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ೨೭ ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ ಕಳೆದ ೧೦ ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದ್ದರೆ, ಕೈ ಪಾಳಯ ಸತತ ೩ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಇದೇ ಫೆ.೧೨, ೧೩ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಬಳಿಕ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Girl in a jacket
error: Content is protected !!