ತಿರುವನಂತಪುರಂ, ಮೇ 20: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಪಕ್ಷ ಭರ್ಜರಿ ಗೆಲುವು ಸಾಧಿಸಿದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ರಚನೆ ಆಗಿದ್ದು ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಿತು.
ಕೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಪಿಣರಾಯಿ ವಿಜಯನ್ ಪ್ರಮಾಣವಚನ ಕಾರ್ಯಕ್ರಮದಲ್ಲಿ 500 ಮಂದಿ ಭಾಗವಹಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಿಎಂ ಜೊತೆಗೆ 20 ಶಾಸಕರು ರಾಜ್ಯ ಸಂಪುಟ ಸಚಿವರಾಗಿ ಪದಗ್ರಹಣ ಮಾಡಿದರು.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮಾರ್ಗಸೂಚಿ ಹಿನ್ನೆಲೆ ನಿಗದಿತ ಪ್ರಮಾಣದ ಸದಸ್ಯರಿಗೆ ಮಾತ್ರ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. 140 ಶಾಸಕರು, 29 ಸಂಸದರು, ನ್ಯಾಯಾಂಗ, ಮಾಧ್ಯಮ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರಿಗೆ ಮಾತ್ರ ಆಹ್ವಾನಿಸಲಾಗಿತ್ತು. ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರು 48 ಗಂಟೆಗಳ ಹಿಂದೆ ಪಡೆದ ಕೊವಿಡ್-19 ನೆಗೆಟಿವ್ ವರದಿ ತರುವುದನ್ನು ಕಡ್ಡಾಯಗೊಳಿಸಲಾಗಿತ್ತು.