ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

Share

ದೆಹಲಿ ವಿಧಾನಸಸಭೆ ಚುನಾವಣೆ-ಮತದಾನ ಆರಂಭ

by-ಕೆಂಧೂಳಿ
ನವದೆಹಲಿ,ಫೆ.೦೫-ಇಡೀ ದೇಶದ ಗಮನ ಸೆಳೆದರಿವು ದೆಹಲಿ ವಿಧಾನಸಭೆ ಚುನಾವಣೆ ಇಂದು ಆರಂಭವಾಗಿದ್ದು ಕಳೆದ ಹತ್ತು ವರ್ಷದಿಂದ ಅಧಿಕಾರದಲ್ಲಿರುವ ಆಮ್‌ಆದ್ಮಿ ಪಕ್ಷ ಮತ್ತೊಮ್ಮೆ ಅಧಿಕಾರದ ಕನಸಿನಲ್ಲಿದೆ ಆದರೆ ದೆಹಲಿ ಮತದಾರ ಯಾರ ಆಯ್ಕೆಯನ್ನು ಭಯಸುತ್ತದೆ ಎನ್ನುವುದು ಗೊತ್ತಾಗಲಿದೆ
೭೦ ಸ್ಥಾನಗಳಿಗೆ ಒಟ್ಟು ೬೯೯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ೧.೫೬ ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು ೧೩೭೬೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ ೭ರಿಂದ ಸಂಜೆ ೬.೩೦ ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

Adavategement

ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು, ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಕುರಿತು ಅವು ಸುಳಿವು ನೀಡಲಿವೆ.
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ದ ಬಿಜೆಪಿಯಿಂದ ರಮೇಶ ಬಿದೂರಿ ಕಾಂಗ್ರೆಸ್‌ನಿಂದ ಅಲ್ಕಾ ಲಂಬಾ ಕಣಕ್ಕೆ ಉಳಿದಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ, ಮೊದಲಾದ ವರು ಕಣದಲ್ಲಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಉಚಿತ ವಿದ್ಯುತ್, ಉಚಿತ ಕುಡಿ ಯುವ ನೀರು ಯೋಜನೆ ಘೋಷಿಸಿ ಇತರ ಪಕ್ಷಗಳಿಗೆ ದಾರಿ ತೋರಿಸಿದ್ದ ಆಮ್ ಆದ್ಮಿ ಪಕ್ಷ ಈ ವರ್ಷದ ಹಳೆಯ ಗ್ಯಾರಂಟಿ ಜೊತೆಗೆ ಇನ್ನಷ್ಟು ಉಚಿತಗಳ ಘೋಷಣೆ ಮಾಡಿದೆ. ಹೀಗಾಗಿ ಅನ್ನ ದಾರಿ ಇಲ್ಲದೇ ಮತ್ತು ಕಾಂಗ್ರೆಸ್ ಕೂಡಾ ನಾನಾ ರೀತಿಯ ಗ್ಯಾರಂಟಿ ಘೋಷಿಸಿವೆ. ಬಹುತೇಕ ಮೂರೂ ಪಕ್ಷಗಳು ಕರ್ನಾ ಟಕ ಮಾದರಿ ಗೃಹಲಕ್ಷ್ಮೀ, ಉಚಿತ ವಿದ್ಯುತ್, ಉಚಿತ ನೀರು, ನಿರುದ್ಯೋಗಿಗಳಿಗೆ ಭತ್ಯೆ, ಉಚಿತ ಬಸ್ ಪ್ರಯಾಣದ ಭರವಸೆ ನೀಡಿವೆ.

ರಾಜ್ಯಗಳ ಪುನರ್ ವಿಂಗಡನೆ ಬಳಿಕ ೧೯೯೩ರಲ್ಲಿ ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ೩ ವರ್ಷಗಳ ಅವಧಿಯಲ್ಲಿ ಪಕ್ಷವು ಮದನ್ ಲಾಲ್ ಖುರಾನಾ, ಸಾಹೀಬ್ ಸಿಂಗ್ ವರ್ಮಾ ಮತ್ತು ಸುಷ್ಮಾ ಸ್ವರಾಜ್ ಅವರನ್ನು ಮುಖ್ಯಮಂತ್ರಿಗಳಾಗಿ ನೇಮಿಸಿ ಕಸರತ್ತು ನಡೆಸಿತ್ತು.

 

Girl in a jacket
error: Content is protected !!