ನವದೆಹಲಿ, ಮೇ,10- ಭಾರತದ ದಾಳಿಗೆ ಈಗ ಪಾಕಿಸ್ತಾನ ತಿರುಗೇಟು ನೀಡಲು ಸನ್ನದ್ದವಾಗಿದ್ದು ಗಡಿಯಲ್ಲಿ ಪಾಕ್ ಕತ್ತಲೆ ದಾಳಿ ಆರಂಭಿಸಿದೆ.
ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜೌರಿ ರಾಜ್ ಕುಮಾರ್ ಥಾಪ್ಪ ಸೇರಿ ಆವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರ ಕಾಶ್ಮೀರದ ಉರಿಯಿಂದ ಜಮ್ಮು ಪ್ರದೇಶದ ರಾಜೌರಿ ಮತ್ತು ಪೂಂಚ್ವರೆಗಿನ ನಿಯಂತ್ರಣ ರೇಖೆಯ ಉದ್ದಕ್ಕೂ ಗಡಿ ಪ್ರದೇಶಗಳಲ್ಲಿ ರಾತ್ರಿಯಿಡೀ ಪಾಕಿಸ್ತಾನಿ ಪಡೆಗಳು ಮಾರ್ಟರ್ ಮತ್ತು ಫಿರಂಗಿ ಶೆಲ್ಗಳನ್ನು ಹಾರಿಸಿವೆ. ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜೌರಿ ಆಗಿದ್ದ ಉನ್ನತ ಅಧಿಕಾರಿ ರಾಜ್ ಕುಮಾರ್ ಥಾಪ್ಪ ಪಾಕಿಸ್ತಾನಿ ಪಡೆಗಳ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಶೆಲ್ ಅವರ ಮನೆಗೆ ಬಡಿದ ನಂತರ ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಗಾಯಗಳಿಂದ ಸಾವನ್ನಪ್ಪಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ರಾಜೌರಿ, ಪೂಂಚ್ ಮತ್ತು ಉರಿಯಲ್ಲಿ ಅನೇಕ ವಸತಿ ಮನೆಗಳು ಶೆಲ್ ದಾಳಿಯಲ್ಲಿ ಹಾನಿಗೊಳಗಾದವು. ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ನಾಶಮಾಡಲು ಭಾರತವು ಆಪರೇಷನ್ ಸಿಂದೂರ್ ಪ್ರಾರಂಭಿಸಿದ ನಂತರ ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಎಲ್ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿನ ಗಡಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.
ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್ ಅಬ್ದುಲ್ಲಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾವು ಸರ್ಕಾರದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜತೆಗೆ, ನಾನು ಅಧ್ಯಕ್ಷತೆ ವಹಿಸಿದ್ದ ಆನ್ಲೈನ್ ಸಭೆಯಲ್ಲೂ ಭಾಗವಹಿಸಿದ್ದರು ಎಂದು ಒಮರ್ ಸ್ಮರಿಸಿದ್ದಾರೆ.
ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ರಾಜ್ ಕುಮಾರ್ ಥಪ್ಪಾ ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡ ನಂತರ ಈ ದಾಳಿ ನಡೆದಿದೆ. ಪಾಕಿಸ್ತಾನದ ಆಕ್ರಮಣವು ಈ ಪ್ರದೇಶದಲ್ಲಿ ಭಾರೀ ಶೆಲ್ ದಾಳಿ ಮತ್ತು ಡ್ರೋನ್ ದಾಳಿಗೆ ಕಾರಣವಾಗಿದೆ.