ನವದೆಹಲಿ,ಮೇ,೧೮: ಕೋವಿಡ್-೧೯ ಸೋಂಕಿಗೆ ಭಾರತ ಸಮರೋಪಾದಿಯಲ್ಲಿ ಸೌಕರ್ಯ ಮತ್ತು ಜಾಗೃತಿ ವಹಿಸುತ್ತಿರುವ ಕಾರಣ ಮಂಗಳವಾರ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ಬೆಳಿಗ್ಗೆ ೯ ಗಂಟೆಗೆ ಮುಕ್ತಾಯವಾದ ೨೪ ಗಂಟೆಗಳ ಅವಧಿಯಲ್ಲಿ ಒಟ್ಟು೨,೬೩,೫೩೩ ಮಂದಿಯಲ್ಲಿ ಸೋಂಕು ದೃಡಪಟ್ಟಿದ್ದು ಇದು ಕಳೆದ ೨೮ ಗಂಟೆಯಲ್ಲಿ ಕನಿಷ್ಠ ಪ್ರಮಾಣವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹಲವು ದಿನಗಳಿಂದ ೪ ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ ೩ ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, ೨ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಆದರೆ, ಹೊಸ ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ಇನ್ನೂ ದೊಡ್ಡ ಮಟ್ಟದಲ್ಲಿಯೇ ದಾಖಲಾಗುತ್ತಿರುವು ಆತಂಕಕ್ಕೆ ಕಾರಣವಾಗಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ೪,೩೪೯ ಮಂದಿ ವೈರಸ್’ಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ೨,೭೮,೭೧೯ಕ್ಕೆ ತಲುಪಿದೆ. ಇನ್ನು ಒಟ್ಟು ಸೋಂಕಿತರ ಸಂಖ್ಯೆ ೨,೫೨,೨೮,೯೯೬ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೩೩,೫೩,೭೬೫ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ ೨೪ ಗಂಟೆಗಳಲ್ಲಿ ೪,೨೨,೪೩೬ ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ ೨,೧೫,೯೬,೫೧೨ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ೧೮,೬೯,೨೨೩ ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ೩೧,೮೨,೯೨,೮೮೧ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ ೧೬ ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ ೪೫ ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.೧ರಿಂದ ೧೮-೪೫ ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಭಾರತದಲ್ಲಿ ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ
Share