ಭಾರತೀಯಾ ನೌಕಪಡೆಗೆ ಆರು ಜಲಾಂರ್ಗಾಮಿ ನೌಕೆಗಳ ನಿಮರ್ಮಾಣಕ್ಕೆ ಅನುಮೋದನೆ

Share

ನವದೆಹಲಿ,ಜೂ,04:ತಮ್ಮ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಭಾರತೀಯ ನೌಕಾಪಡೆಗಾಗಿ ಆರು ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸುವ ಮೆಗಾ ಯೋಜನೆಗೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ.

ದಕ್ಷಿಣ ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಚೀನಾ ಅತಿಕ್ರಮಣವನ್ನು ನಿರ್ವಹಿಸುವ ನಿಟ್ಟಿನಲ್ಲಿ ಮತ್ತು ನೌಕಾಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಇಲಾಖೆ ಮತ್ತೆ ಆರು ಹೊಸ ಸಬ್ ಮೆರಿನ್ ಗಳ ನಿರ್ಮಾಣಕ್ಕೆ ಅಸ್ತು ಎಂದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಪಿ-75 ಇಂಡಿಯಾ ಸ್ಕಾರ್ಪಿನ್ ಜಲಾಂತರ್ಗಾಮಿ ನೌಕೆಯನ್ನು ಮೇಕ್-ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲು ಶೀಘ್ರದಲ್ಲೇ ಅನುಮತಿ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಡಿಎಸಿ ಸೇನೆಗೆ ಅಗತ್ಯ ಇರುವ ರಕ್ಷಣಾ ಪರಿಕರಗಳನ್ನು ಖರೀದಿ ಮಾಡುವ ಅಥವಾ ನಿರ್ಮಾಣ ಮಾಡಲು ಹಣ ಬಿಡುಗಡೆ ಮತ್ತು ಅನುಮೋದನೆ ನೀಡುವ ಸರ್ವೋಚ್ಛ ಸಂಸ್ಥೆಯಾಗಿದೆ.

Girl in a jacket
error: Content is protected !!