ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು

Share

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು

by-ಕೆಂಧೂಳಿ

ಚಾಮರಾಜನಗರ, ಮಾ,01-ಮಲೇಮಾಹಾದೇಶ್ಚರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಕೊಳ್ಳೇಗಾಲ ತಾಲೂಕಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದೆ.

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Girl in a jacket
error: Content is protected !!