ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ

Share

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ

by-ಕೆಂಧೂಳಿ

ಲೈವ್‌ಬ್ಯಾಂಡ್‌ನಿಂದ ಹೊರಬರುತ್ತಿದ್ದ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಬೀಕರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಶೋಕನಗರದ ಗರುಡಮಾಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ

ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ ೧ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು. ಇದನ್ನೂ ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ ೧ ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ ೧೧ ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್ಡಿಪಿಎಸ್ ಕೇಸ್‌ಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. ೨೦೧೬ರಿಂದ ರೌಡಿಶೀಟರ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಗೆ ರಾಜಕೀಯ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ.

Girl in a jacket
error: Content is protected !!