ಚಿನ್ನದ ಹುಡುಗನಿಗೆ ಶುಭಾಶಯಗಳ ಮಹಾಪೂರ: ಭರ್ಜರಿ ಗಿಫ್ಟ್ ಘೋಷಿಸಿದ ಆನಂದ್ ಮಹೀಂದ್ರಾ

Share

Reported by: H.D.Savita

ಟೋಕಿಯೋ: ಜಾವಲಿನ್ ಥ್ರೋ ವಿಭಾಗದಲ್ಲಿ ಭಾರತಕ್ಕೆ‌ ಚಿನ್ನದ‌ ಪದಕ ತಂದು ಕೊಟ್ಟ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿವೆ.

ಹರಿಯಾಣ ಸರ್ಕಾರವು 6ಕೋಟಿ ರೂ. ಬಹುಮಾನ ಘೋಷಿಸಿದೆ. ಅದರ ಜೊತೆಗೆ ಎ ದರ್ಜೆಯ ಸರ್ಕಾರಿ ಉದ್ಯೋಗವನ್ನು ನೀಡಿದೆ. ಅಲ್ದೇ ಬಿಸಿಸಿಐ ಕೂಡಾ 1ಕೋಟಿ ರೂ. ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಮಹೀಂದ್ರಾ ಕಂಪನಿಯ ಮಾಲೀಕ ಆನಂದ್ ಮಹೀಂದ್ರಾ ಭರ್ಜರಿ ಉಡುಗೊರೆ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಸೇರಿದಂತೆ ದೇಶದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ. ಉದ್ಯಮಿ ಆನಂದ್ ಮಹೀಂದ್ರಾ ಅವರು ನೀರಜ್ ಗೆ XUV 700 ಎಂಬ ದುಬಾರಿ ಕಾರು ಗಿಫ್ಟ್ ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Girl in a jacket
error: Content is protected !!