Reported By : H.D.Savita
ಟೋಕಿಯೋ: ಟೋಕಿಯೋ ಪ್ಯಾರಾಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಭಾರತಕ್ಕೆ ಚೊಚ್ಚಲ ಪದಕ ದೊರೆತಿದೆ. ಭಾರತದ ಪ್ಯಾರಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರು ಬೆಳ್ಳೆ ಪದಕಕ್ಕೆ ಕೊರಳೊಡ್ಡಿದ್ದಾರೆ.
ಟೇಬಲ್ ಟೆನಿಸ್ನ ಫೈನಲ್ ಪಂದ್ಯದಲ್ಲಿ ಚೀನಾದ ಝೋ ಯಿಂಗ್ ವಿರುದ್ಧ 4-3 ಅಂತರದಿಂದ ಸೋಲು ಕಾಣುವ ಮೂಲಕ ಭಾವಿನಾ ಚಿನ್ನ ಗೆಲ್ಲುವಲ್ಲಿ ಎಡವಿದರು. ಆದರೆ, ಪ್ಯಾರಾಲಿಂಪಿಕ್ಸ್ನ ಟೇಬಲ್ ಟೆನಿಸ್ನಲ್ಲಿ ಭಾರತ ಈವರೆಗೆ ಫೈನಲ್ಗೆ ಲಗ್ಗೆಯಿಟ್ಟಿದ್ದೇ ಇಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ತಲುಪಿ ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆಯಾಗಿದೆ.
ಇದಕ್ಕೂ ಮುನ್ನ ಶನಿವಾರ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಭಾವಿನಾ ಅವರು 2016ರ ರಿಯೋ ಒಲಿಂಪಿಕ್ ಪದಕ ವಿಜೇತೆ ಚೀನಾದ ಮಿಯಾ ಝಂಗ್ ಅವರನ್ನು3-2 ಅಂಕಗಳ ಅಂತರದಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿದ್ದರು.