
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021 ಸೀಸನ್ 14ರಲ್ಲಿ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ 27 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸಿಎಸ್ಕೆ 4ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು ಡುಪ್ಲೆಸಿಸ್ (86) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ಗಳನ್ನು ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ಕೆಕೆಆರ್ ತಂಡವು ನಿಗದಿತ 20 ಓವರ್ನಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 27 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಭರ್ಜರಿ ಜಯದೊಂದಿಗೆ ಧೋನಿ ನಾಯಕತ್ವದಲ್ಲಿ ಸಿಎಸ್ಕೆ ತಂಡವು 4ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.
