ಕೋಲ್ಕೊತ್ತಾ,ಮೇ,೨೦: ಇದೇ ಮೊದಲ ಬಾರಿಗೆ ಭಾರತ ಮಹಿಳಾ ಕ್ರಿಕೇಟಿಗರು ಹಗಲು-ರಾತ್ರಿ ಪಿಂಕ್ ಬಾಲ್ ಕ್ರಿಕೆಟ್ ಆಡಲಿದ್ದಾರೆ.
ಈ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ ಇಂತಹ ಮಹತ್ವದ ನಿರ್ಧಾರವನ್ನು ತಗೆದುಕೊಂಡಿದೆ ಈ ಕುರಿತಂತೆ ಟ್ವೀಟ್ ಮಾಡಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ಇದೇ ವರ್ಷಾಂತ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವನಿತೆಯರು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಆ ವೇಳೆ ಅವರು ಆಸ್ಟ್ರೇಲಿಯಾ ತಂಡದ ವಿರುದ್ಧ ಮೊದಲ ಬಾರಿಗೆ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಕ್ರಿಕೆಟ್ ಆಡಲಿದ್ದಾರೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಮತ್ತೊಂದು ಮಜಲಿಗೆ ತೆಗೆದುಕೊಂಡು ಹೋಗಲು ಅತೀವ ಸಂತಸವಾಗುತ್ತಿದೆ. ನಮ್ಮ ವನಿತೆಯರು ಡೇ-ನೈಟ್ ಟೆಸ್ಟ್ ಮ್ಯಾಚ್ ಆಲಿದ್ದಾರೆ. ಇದರಿಂದ ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಭಾರೀ ಉತ್ತೇಜನ ದೊರೆಯಲಿದೆ ಎಂದು ಜಯ್‌ಷಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆಇದಾದ ಕೆಲವೇ ಕ್ಷಣಗಳಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ನಿರ್ಧಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಂತಾರಾಕ್ಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದೆ.
ಹಗಲು-ರಾತ್ರಿ ಪಿಂಕ್ ಪಂದ್ಯ ಆಡಲಿದ್ದಾರೆ ಮಹಿಳಾ ಕ್ರಿಕೆಟಿಗರು
Share