ಇಷ್ಟು ದಿನ ಹಾನಗಲ್ ಕಂಡಿರಲಿಲ್ವ ಸರ್ಕಾರದ ವಿರುದ್ದ ಸಿದ್ದು ಕಿಡಿ

Share

ಹುಬ್ಬಳ್ಳಿ, ಅ,22ನಾವಣೆ ವೇಳೆ ನಾವು ಮಿಷನ್ ಹಾನಗಲ್ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳುತ್ತಿದ್ದಾರೆ, ಇಷ್ಟು ದಿನ ಏಕೆ ಹಾನಗಲ್ ಅವರಿಗೆ ಕಂಡಿರಲಿಲ್ಲ? ಬಡವರಿಗೆ ಒಂದು ಮನೆಯಾದ್ರೂ ಕೊಟ್ಟಿದ್ದಾರಾ? ಅಭಿವೃದ್ಧಿ ಎಂದರೆ ಏನು ಗೊತ್ತಾ? ಬರೀ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲೋದು ಗೊತ್ತು ಅವರಿಗೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು.

ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಹಾನಗಲ್ ಕ್ಷೇತ್ರಕ್ಕೆ ಏನೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೀನಿ ಎಂದು ಹಿಂದಿನ ಶಾಸಕರಾದ ಮನೋಹರ ತಹಶಿಲ್ದಾರ್ ನ ಕೇಳಿನೋಡಿ. ನಾನು 2400 ಕೋಟಿ ರೂಪಾಯಿ ಅನ್ನು ಕ್ಷೇತ್ರದ ಅಭಿವೃದ್ಧಿಗೆ ನೀಡಿದ್ದೆ, ಈಗಿನ ಸರ್ಕಾರ ಎಷ್ಟು ಹಣ ನೀಡಿದೆ ಹೇಳಲಿ. ಹಾನಗಲ್ ನಲ್ಲಿ ಸಾಧನಾ ಸಮಾವೇಶ ಮಾಡಿ, ಜನರಿಗೆ ಸರ್ಕಾರದ ಸಾಧನೆಗಳ ಮಾಹಿತಿ ನೀಡಿದ್ದೆ ಎಂದು ಹೇಳಿದರು.

ಬಿಜೆಪಿ ಪಕ್ಷದಲ್ಲಿ ಒಬ್ಬ ಮುಸ್ಲಿಂ ಶಾಸಕ / ಮಂತ್ರಿ ಇಲ್ಲ. ಇದು ಬೇರೆ ಧರ್ಮದ ಬಗ್ಗೆ ದ್ವೇಷ ಮಾಡಿದಂತಲ್ಲವೆ? ನಮ್ಮ ಪಕ್ಷದಲ್ಲಿ ಎಲ್ಲಾ ಜಾತಿ, ಧರ್ಮಗಳ ಶಾಸಕರಿದ್ದಾರೆ. ಎಲ್ಲಾ ಜಾತಿ, ಧರ್ಮಗಳನ್ನು ಒಟ್ಟಿಗೆ ಕರೆದುಕೊಂಡ ಹೋಗುವುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಸಂವಿಧಾನ ಬದಲಾವಣೆ ಮಾಡ್ತೀವಿ ಎಂದವರು ಬಿಜೆಪಿಯವರು.

ಬಿಜೆಪಿ ಪಕ್ಷದವರು ಹಣ ಹಂಚುತ್ತಿದ್ದಾರೆ ಎಂದು ಜನ ಹೇಳುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೇಲೆ ಮತ ಕೇಳಲು ಕಳೆದ ಎರಡೂಕಾಲು ವರ್ಷಗಳಲ್ಲಿ ಯಾವ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಹೀಗಾಗಿ ಹಣ ಹಾಕಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು‌ಆರೋಪಿಸಿದರು.

ಸುಳ್ಳು ಭರವಸೆ ಕೊಡುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಮುಖ್ಯಮಂತ್ರಿ ಬೊಮ್ಮಾಯಿ ಬಂದಾಗ ಹಾನಗಲ್ ಪ್ರಚಾರದಲ್ಲಿ ಅಲೆ ಎದ್ದಿಲ್ವಂತ? ಸೋಲಿನ ಭಯದಿಂದ ಏನೇನೊ ಮಾತನಾಡಲು ಆರಂಭಿಸಿದ್ದಾರೆ.

ಎರಡೂ ಡೋಸ್ ಕೊರೊನಾ ಲಸಿಕೆ ಪಡೆದವರು 29 ಕೋಟಿ ಜನ ಅಷ್ಟೆ. 100 ಕೋಟಿ ಲಸಿಕೆ ಹಾಕಿದೀವಿ ಎಂದು ಸಂಭ್ರಮಾಚರಣೆ ಮಾಡಲು ಸರ್ಕಾರ ಹೊರಟಿದೆ. ಆಕ್ಸಿಜನ್, ವೆಂಟಿಲೇಟರ್, ಆಸ್ಪತ್ರೆ, ಆಂಬುಲೆನ್ಸ್, ಚಿಕಿತ್ಸೆ ಸಿಗದೆ ದೇಶದಲ್ಲಿ ಕನಿಷ್ಟ 50 ಲಕ್ಷ ಜನ ಕೊರೊನಾದಿಂದ ಸತ್ತಿದ್ದಾರೆ. ಇದಕ್ಕೆ ಸರ್ಕಾರದ ನಿಷ್ಕ್ರಿಯತೆ ಕಾರಣ.

ಹಾನಗಲ್ ನಲ್ಲಿ ಬಿಜೆಪಿ ಸೋಲುತ್ತೆ ಎಂದು ಬಸವರಾಜ ಬೊಮ್ಮಾಯಿಯವರಿಗೂ ಮತ್ತು ಮುರುಗೇಶ್ ನಿರಾಣಿ ಅವರಿಗೂ ಗೊತ್ತಿದೆ ಎಂದರು.

Girl in a jacket
error: Content is protected !!