ಈ ಬಾರಿ ದೆಹಲಿ ಬೇಟೆ ವೇಳೆ ಸಚಿವ ಸಂಪುಟ ಕುರಿತು ಚರ್ಚಿಸೊಲ್ಲ; ಸಿಎಂ

Share

ಬೆಂಗಳೂರು,ಜುಲೈ,29: ನಾಳೆ ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡುವ ಯೋಚನೆ ಇದೆ. ಈ ಭೇಟಿಯ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದರೇ ದೆಹಲಿಗೆ ಹೋಗುತ್ತೇನೆ. ಈ ಬಾರಿ ದೆಹಲಿಯ ಭೇಟಿ ವೇಳೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸುವುದಿಲ್ಲ, ಬದಲಿಗೆ ಇನ್ನೊಂದು ಬಾರಿ ದೆಹಲಿಗೆ ಭೇಟಿ ನೀಡಿದ ವೇಳೆಯಲ್ಲಿ ಹೈಕಮಾಂಡ್‌ ಜೊತೆಗೆ ಮಾತನಾಡುವೆ ಎಂದು ಹೇಳಿದರು.

ಉತ್ತರ ಕನ್ನಡದಲ್ಲಿ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿದೆ. ಮೂರು ಜನ ಮೃತಪಟ್ಟಿದ್ದಾರೆ. ಮಳೆಹಾನಿ ಸಮೀಕ್ಷೆ ಮಾಡಿ ಅಧಿಕಾರಿಗಳ ಜತೆ ಚರ್ಚಿಸುವೆ. ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವೆ ಎಂದರು.

ಸಿಎಂ ಬಸವರಾಜ ಬೊಮ್ಮಯಿ ಇಂದು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದಾರೆ.ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಕಾರಿನ ಮೂಲಕ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಾನಾ ಸ್ಥಳಗಳಿಗೆ ತೆರಳಿ ಮಾಹಿತಿ ಪಡೆದು ಅಧಿಕಾರಿಗಳ ಬಳಿ ಚರ್ಚೆ ನಡೆಸಲಿದ್ದಾರೆ. ಇನ್ನೂ ಅವರು ಉತ್ತರ ಕನ್ನಡ ಜಿಲ್ಲೆಗೆ ತೆರಳುವ ಮುನ್ನ ಮಾಜಿ ಸಿಎಂ ಬಿಎಸ್‌ವೈ ಅವರ ಮನೆಗೆ ಭೇಟಿ ನೀಡಿ ಚರ್ಚಿಸಿದರು.

Girl in a jacket
error: Content is protected !!