ಕಾಂಗ್ರೆಸ್ ನಾಯಕನನ್ನು ಭೇಟಿಯಾದ ಯತ್ನಾಳ್
by-ಕೆಂಧೂಳಿ
ಹುಬ್ಬಳ್ಳಿ, ಮಾ,31-ಹೊಸ ಪಕ್ಷ ರಚಿಸುತ್ತೇನೆ ಎಂದು ಸುಳಿವು ನೀಡದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿರುವುದ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಇಂದು ಅವರು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನಿನ್ನೆಯಷ್ಟೇ ಯುಗಾದಿ ಹಬ್ಬದ ದಿನದಂದು ಅವರು ತಮ್ಮ ಅನುಯಾಯಿಗಳೊಂದಿಗೆ ಚರ್ಚಿಸಿ ಹೊಸ ಪಕ್ಷ ಕಟ್ಟುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು. ಜೊತೆಗೆ, ಮುಂದಿನ ವಿಜಯದ ದಶಮಿ ದಿನದಂದು ಪಕ್ಷದ ಘೋಷಣೆ ಮಾಡುವುದಾಗಿ ಹೇಳಿದ್ದರು.
ಈ ಘಟನೆಯ ಬೆನ್ನಲ್ಲೇ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದೆ.
ಇಂದು ಬಸನಗೌಡ ಪಾಟೀಲ್ ಯತ್ನಾಳ್ ಕೊಪ್ಪಳಕ್ಕೆ ಭೇಟಿ ನೀಡಿ ತಮ್ಮ ಬೆಂಬಲಿಗರೊಂದಿಗೆ ಚರ್ಚೆ ನಡೆಸಲಿದ್ದಾರೆ. ಮುಂದಿನ ನಡೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿವೆ.