ಕೇಜ್ರಿವಾಲ ನಿರ್ಧಾರವೇ ಬಿಜೆಪಿ ಗೆಲುವಿಗೆ ಕಾರಣ-ಚೆಲುವುರಾಯಸ್ವಾಮಿ

Share

ಕೇಜ್ರಿವಾಲ ನಿರ್ಧಾರವೇ ಬಿಜೆಪಿ ಗೆಲುವಿಗೆ ಕಾರಣ-ಚೆಲುವುರಾಯಸ್ವಾಮಿ

 by-ಕೆಂಧೂಳಿ
ಮಂಡ್ಯ,ಫೆ,೦೯-ಕೇಜ್ರಿವಾಲ ಇಂಡಿಯಾ ಒಕ್ಕೂಟದ ಜೊತೆ ಇದ್ದಿದ್ದರೆ ಫಲಿತಾಂಶ ಈ ರೀತಿ ಬರುತ್ತಿರಲಿಲ್ಲ ಕೇಜ್ರಿವಾಲ್ ಅವರ ನಿರ್ಧಾರದಿಂದ ಬಿಜೆಪಿ ಗೆಲುವಿಗೆ ಕಾರಣವಾಗಿದೆ ಎಂದು ಕೃಷಿ ಸಚಿವ ಚೆಲುವುರಾಯ ಸ್ವಾಮಿ ತಿಳಿಸಿದ್ದಾರೆ

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ ಮಾಡಿದರು. ಹೀಗಾಗಿ ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದರು.
ಕಳೆದ ಬಾರಿಯೂ ಕೃಷಿ ಇಲಾಖೆಗೆ ಹೊಸ ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡಿದ್ದರು. ಈ ಬಾರಿಯೂ ಉತ್ತಮ ಕಾರ್ಯಕ್ರಮಗಳು ಸಿಗುವ ನಿರೀಕ್ಷೆ ಇದೆ. ಇನ್ನೂ ಸಚಿವಾಕಾಂಕ್ಷಿಗಳಿಗೆ ನಿಗಮ ಮಂಡಳಿ ನೀಡಿ ಸಮಾಧಾನಪಡಿಸಿರುವ ವಿಚಾರವಾಗಿ, ಸಚಿವಾಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ. ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ಛೇರ್ಮನ್ ಒಳ್ಳೆಯ ಹುದ್ದೆಯಾಗಿದ್ದು, ರಾಜ್ಯಾದ್ಯಂತ ಕೆಲಸ ಮಾಡಲು ಉತ್ತಮ ಅವಕಾಶವಿದೆ. ನರೇಂದ್ರ ಸ್ವಾಮಿಯವರು ಎಂಜಿನಿಯರ್ ಆಗಿದ್ದರಿಂದ ಅವಕಾಶ ಸಿಕ್ಕಿದೆ ಎಂದರು.
ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. ಹೀಗಾಗಿ ಡಿಸಿ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿಸಲಾಗಿದೆ. ಮಿಮ್ಸ್‌ಗೆ ಮೇಜರ್ ಸರ್ಜರಿ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಶೀಘ್ರವೇ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.
ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ೨೭ ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ ಕಳೆದ ೧೦ ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದ್ದರೆ, ‘ಕೈ’ ಪಾಳಯ ಸತತ ೩ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ

 

Girl in a jacket
error: Content is protected !!