ಬೆಂಗಳೂರು,ಜೂ,೨೬: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆಳಿಗೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಿದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಟಾಟಿಸಿ ಮಾತನಾಡಿದ ಅವರು,’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದಲೂ ಹಲವು ಸವಾಲುಗಳು ಎದುರಾಗಿವೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುನ್ನಡೆಸಲಾಗುತ್ತಿದೆ’ ಎಂದು ಹೇಳಿದರು.
ಆರಂಭದಲ್ಲೇ ಪ್ರವಾಹದಿಂದ ತೊಂದರೆ ಆಗಿತ್ತು. ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವಿದೆ. ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಜನರಿಗೆ ಪರಿಹಾರ ನೀಡಲಾಗಿದೆ. ಈಗ ಲಸಿಕಾ ಅಭಿಯಾನವೂ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಯಡಿಯೂರಪ್ಪ ಹೇಳಿದರುಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯ ಘಟಕದ ಪದಾಧಿಕಾರಿಗಳು ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದಾರೆ.
ಜಿಲ್ಲಾ ,ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ದರಾಗಲು ಸಿಎಂ ಕರೆ
Share