ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ

Share

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿ.ಕೆ.ಶಿ.ತರಾಟೆ

by-ಕೆಂಧೂಳಿ

ಬೆಂಗಳೂರು, ಫೆ. 05-“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

Adavategement

ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು.”ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು.

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

Girl in a jacket
error: Content is protected !!