ಬಿಎಸ್ ವೈ ಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

Share

ಬೆಂಗಳೂರು,ಸೆ,24: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು.

ರಾಜ್ಯ ವಿಧಾನಸಭೆಯಲ್ಲಿ ಅತ್ಯುನ್ನತ ಗೌರವಕ್ಕೆ ಭಾಜನರಾದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಜನಸೇವೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡ ನಾಯಕರಾದ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ ಅಧಿವೇಶನದಲ್ಲಿ ಇಂತಹ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದ್ದು ಮುಂದಿನ ವರ್ಷದಿಂದ ಈ ಪ್ರಕ್ರಿಯೆ ಮುಂದುವರೆಯಲಿದೆ ಎಂದರು.

ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಸಹಜವಾಗಿ ಯಾರಿಗೆ ಪ್ರಶಸ್ತಿ ಕೊಡಬೇಕು ಎನ್ನುವುದು ಗೊಂದಲ ಮೂಡಿಸಿತ್ತು. ನನ್ನ ಜೀವನದಲ್ಲಿ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

Girl in a jacket
error: Content is protected !!