ಮುಂಬರುವ ಚುನಾವಣೆ ಬೊಮ್ಮಾಯಿ ಅಥವಾ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ-ಈಶ್ವರಪ್ಪ

Share

ದಾವಣಗೆರೆ,ಸೆ,೧೯:ಪಕ್ಷವನ್ನು ಮತ್ತಷ್ಟು ಶಕ್ತಿಗೊಳಿಸುವುದಲ್ಲದೆ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಎದುರಿಸಬೇಕು ಮತ್ತು ರೂಪರೇಷಗಳನ್ನು ಕುರಿತು ಕಾರ್ಯಕಾರಣಿಯಲ್ಲಿ ಚರ್ಚಿಸಲಾಗುತ್ತಿದೆ ಎಂದು ಹೇಳಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಮುಂಬರುವ ಚುನಾವಣೆಗಳನ್ನು ಮುಖ್ಯಮಂತ್ರಿ ಬೊಮ್ಮಾಯಿ ಅಥವಾ ಪಕ್ಷದ ಅಧ್ಯಕ್ಷ ಕಟೀಲ್‌ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,೨೦೨೩ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ ಗುರಿಯಾಗಿದೆ ಎಂದು ಅವವರು  ಹೇಳಿದ್ದಾರೆ. ಕಾರ್ಯಕಾರಿಣಿ ಸಭೆ ಇಡೀ ರಾಜ್ಯದ ಪಕ್ಷದ ಕಾರ್ಯಕರ್ತರಿಗೆ ಸ್ಪೂರ್ತಿ ನೀಡುತ್ತದೆ ಎಂಬ ವಿಶ್ವಾಸವಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯಲು ಭಾರತೀಯ ಜನತಾ ಪಾರ್ಟಿ ಪ್ರಯತ್ನ ಪಡುತ್ತದೆ ಎಂದರು.

ಕೇಂದ್ರದ ನಾಯಕರು ಹೇಳಿದಂತೆ ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಮತ್ತು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದ್ದು ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದರು.

Girl in a jacket
error: Content is protected !!