ಯುವ ಚಳವಳಿಗಾರರನ್ನು ಕೇಂದ್ರ ಹತ್ತಿಕ್ಕುತ್ತಿದೆ-ಡಿಕೆಶಿ

Share

ಬೆಂಗಳೂರು,ಮೇ,೧೫: ಕೋವಿಡ್ ಪರಿಹಾರ ಕಾರ್ಯದಲ್ಲಿ ನಿರತರಾದವರನ್ನು ಹಾಗೂ ಯುವ ಚಳವಳಿಗಾರರನ್ನು ಕೇಂದ್ರ ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಭಾರತೀಐ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೊಳಪಡಿಸಿರುವುದು ಖಂಡನೀಯ ಎಂದಿದ್ದಾರೆ ಈ ಮೂಲಕ ಯುವಕರ ಚಳವಳಿಗಳನ್ನು ಹತ್ತಿಕ್ಕುವ ಹುನ್ನಾರ ನಡೆದಿದೆ ಎಂದು ಅವರು ದೂರಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಕೆ,ಶಿವಕುಮಾರ್ ಅವರು ,
“ಯುವ ಚಳುವಳಿಯ ದೈತ್ಯರಲ್ಲಿ ಶ್ರೀನಿವಾಸ್ ಸಹ ಒಬ್ಬರು ಎಂದು ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ತಿಳಿದುಕೊಳ್ಳಬೇಕು. ಯಾವುದೇ ರಾಜಕೀಯ ಶಕ್ತಿಯಿಲ್ಲದೆ ರಾಷ್ಟ್ರಕ್ಕೆ ಅವರ ಕೊಡುಗೆ ಮತ್ತು ಸೇವೆಯನ್ನು ಇಡೀ ದೇಶ ಮತ್ತು ವಿಶ್ವ ಮಾಧ್ಯಮಗಳು ಶ್ಲಾಘಿಸುತ್ತಿವೆ” ಎಂದು ಶಿವಕುಮಾರ್ ಹೇಳಿದರು.
ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಷ್ಟ್ರಕ್ಕೆ ದೊಡ್ಡ ಆಸ್ತಿ. ಕೇಂದ್ರ ಸರ್ಕಾರದ ಮನೋಭಾವವನ್ನು ನಾನು ಖಂಡಿಸುತ್ತೇನೆ, ಅವರು ಯುವ ಚಳುವಳಿಯನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಯುವಕರು ಶ್ರೀನಿವಾಸ್ ಅವರ ಪರವಾಗಿ ನಿಲ್ಲಬೇಕು, ಅವರು ಯಾವುದೇ ರಾಜಕೀಯ ಕಾರ್ಯಗಳಲ್ಲಿ ತೊಡಗಿಲ್ಲ, ಆದರೆ ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಕೋವಿಡ್ ಸಮಯದಲ್ಲಿ ಜನರಿಗೆ ನೆರವು ನೀಡುವ ಮೂಲಕ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ಶುಕ್ರವಾರ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

Girl in a jacket
error: Content is protected !!