ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದ ಸಿದ್ದು ಖರ್ಗೆ ಭೇಟಿ

Share

 ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದ ಸಿದ್ದು ಖರ್ಗೆ ಭೇಟಿ

  by-ಕೆಂಧೂಳಿ

ಬೆಂಗಳೂರು, ಮಾ,೨೩-ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಹತ್ತಿ ಹುರಿಯುತ್ತಿರುವ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಹಲವಾರು ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ.
ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ ಎನ್ನುವುದು ನೆಪ ಮಾತ್ರ ಆದರೆ ಈ ಭೇಟಿಯ ಉದ್ದೇಶವೇ ರಾಜಕೀಯ ಬೆಳವಣಿಗೆಗಳ ಚರ್ಚೆ ಅಡಗಿದೆ ಎನ್ನುವುದನ್ನು ತಳ್ಳಿಹಾಕುವಂತಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣ ಸದ್ದು ಮಾಡಿ ಸಂಘರ್ಷವೇ ಉಂಟಾದ ಹೊತ್ತಿನಲ್ಲಿ ಈ ಭೇಟಿ ಹಲವಾರು ಅರ್ಥಗಳನ್ನು ಕಲ್ಪಿಸದೆ ಇರಲಾರದು.
ಮಲ್ಲಿಕಾರ್ಜುನ ಭೇಟಿ ವೇಳೆ ಅವರ ಪುತ್ರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಕೂಡ ಇದ್ದಿದ್ದು ವಿಶೇಷವಾಗಿತ್ತು ಈ ವೇಳೆ . ಸುಮಾರು ೪೫ ನಿಮಿಷಗಳ ಕಾಲ ಸಿದ್ದರಾಮಯ್ಯ, ಖರ್ಗೆ ಮಾತುಕತೆಯನ್ನು ನಡೆಸಿದ್ದಾರೆ
ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದೆಹಲಿ ಭೇಟಿ, ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಈ ಭೇಟಿ ಬಳಿಕ ಖರ್ಗೆ ಅಥವ ಸಿದ್ದರಾಮಯ್ಯ ಯಾರೂ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಮಧುಗಿರಿ ಶಾಸಕ, ಸಹಕಾರ ಸಚಿವ ಕೆ. ಎನ್. ರಾಜಣ್ಣ ತಮ್ಮನ್ನು ಹನಿಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿದೆ ಎಂದು ಬಜೆಟ್ ಅಧಿವೇಶನದ ಸಮಯದಲ್ಲಿ ಹೇಳಿಕೆ ನೀಡಿ ರಾಜ್ಯ ರಾಜಕೀಯದಲ್ಲಿ ಸಂಚಲ ಉಂಟು ಮಾಡಿದ್ದಾರೆ. ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ವಿಧಾನಸಭೆ ಕಲಾಪದ ಕೊನೆಯ ದಿನವಾದ ಶುಕ್ರವಾರ ಹೈಡ್ರಾಮ ಮಾಡಿದ್ದರು. ಹನಿಟ್ರ್ಯಾಪ್ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದರು. ಆದರೆ ಬಿಜೆಪಿ ಸದಸ್ಯರು ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿತ್ತು. ಸಹಕಾರ ಸಚಿವ ಕೆ. ಎನ್. ರಾಜಣ್ಣ ತಮ್ಮನ್ನು ಹನಿಟ್ರ್ಯಾಪ್ ಮಾಡುವ ಪ್ರಯತ್ನದ ಕುರಿತು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಅಲ್ಲದೇ ಬಳಿಕ ಹೈಕಮಾಂಡ್ ನಾಯಕರ ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಹೈಕಮಾಂಡ್ ನಾಯಕರಿಗೆ ಸಚಿವರು ಸಾಕ್ಷ್ಯಗಳನ್ನು ಸಹ ಒದಗಿಸುವ ಸಾಧ್ಯತೆ ಇದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನದ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಳಿ ಈಗಾಗಲೇ ಹೈಕಮಾಂಡ್ ನಾಯಕರು ಮಾಹಿತಿಯನ್ನು ಪಡೆದಿದ್ದಾರೆ.
ಇದಕ್ಕೂ ಮುನ್ನ ಸಚಿವ ರಾಜಣ್ಣ ಅವರ ಪುತ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಮಾಡಿದ ಮಾಹಿತಿ ಕುರಿತಂತೆ ಕೆಲವು ಸಾಕ್ಷ್ಯಗಳು ತಮ್ಮ ಬಳಿ ಇವೆ ಹೈಕಮಾಂಡ್‌ಗೆ ಒದಗಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Girl in a jacket
error: Content is protected !!