ಬೆಂಗಳೂರು,ಜು,28: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸಿಎಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಛ ನೀಡಿ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಆರ್.ಅಶೋಕ್, ಡಿಸಿಎಂ ಗೋವಿಂದ ಕಾರಜೋಳ ಸೇರಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.