ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆ ಸಾಧ್ಯತೆ

Share

ಬೆಂಗಳೂರು,ಜೂ,26-ರಾಜ್ಯ ಬಿಜೆಪಿಯಲ್ಲಿ ಉಂಟಾಗಿದ್ದ ಆಂತರಿಕ ಭಿನ್ನಾಭಿಪ್ರಾಯಗಳು ಈಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗುವ ಸಾಧ್ಯತೆಗಳು ಹೆಚ್ಚಿವೆ.
ಪ್ರತಿಪಕ್ಷದ ನಾಯಕ ಆಶೋಕ್ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ದಿಡೀರ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡು ರಾಜ್ಯದ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುತ್ತಿಲ್ಲ ಎನ್ನುವ ಕಾರಣಕ್ಕೆ ಈ ಇಬ್ಬರು ನಾಯಕರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಸ್ ತಗೆದುಕೊಂಡಿದ್ದಾರೆ ಎನ್ನಲಾಗಿದೆ.

ಕಳೆದವಾರ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ವೇಳೆ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಕೆಲವೊಂದಿಷ್ಟು ಚೆರ್ಚೆಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಅಮಿತ್‌ ಶಾ ಬಂದಿದ್ದ ವೇಳೆ ಇತರ ಪ್ರತ್ಯೇಕ ಬಣವೂ ಕೂಡ ಸಭೆ ಮಾಡಿತ್ತು. ಈ ಸಭೆಯಲ್ಲಿ ಸಚಿವ ಸೋಮಣ್ಣ ಭಾಗಿಯಾಗಿದ್ದು ಕೂಡ ಚರ್ಚೆಯಾಗಿತ್ತು ಎಂದು ತಿಳಿದುಬಂದಿದೆ.

ಬಿಜೆಪಿಯ ಪ್ರಭಾವಿ ನಾಯಕರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ನೇಮಕ ಮಾಡಲು ಸಿದ್ಧರಾಗಿದ್ದು, ಇತರರು ಬೇರೆಯದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

ಪ್ರಸ್ತುತ ಕೇಂದ್ರ ಕೃಷಿ ಸಚಿವರಾಗಿರುವ ಚೌಹಾಣ್ ಅವರು, ಮುಂದಿನ ತಿಂಗಳು ರಾಜ್ಯಕ್ಕೆ ಬಂದು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸುವ ನಿರೀಕ್ಷೆಯಿದೆ ಪಕ್ಷದ ಮೂಲಗಳು ತಿಳಿಸಿವೆ.

ಅಮಿತ್ ಶಾ ಬೆಂಗಳೂರಿಗೆ‌ಬಂದಾಗ ಸೋಮಣ್ಣ ಅಂಡ್ ಟೀಂ ಬೇಟಿಯಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡದೆ ಹೋದರೆ ಮತ್ತಷ್ಟು ವ್ಯವಸ್ಥೆ ಹದಗೆಡುತ್ತದೆ…ಹಾಗಾಗಿ ಅವರನ್ನು ಬದಲಿಸಿ ಸಮರ್ಥ ನಾಯಕರನ್ನು ನೇಮಿಸಿ ಎಂದು ಹೇಳಿದ್ದಾರಲ್ಲದೆ…ಲಿಂಗಾಯತ ನಾಯಕರ ಅಗತ್ಯವಿದ್ದು ತಾವು ಅವಕಾಶ ಕೊಟ್ಟರೆ ಅಧ್ಯಕ್ಷಸ್ಥಾನ ನಿರ್ವಹಿಸುತ್ತೇನೆ ಎಂದಿದ್ದಾರೆ ಎನ್ನಲಾಗುತ್ತಿದೆ.
ಈ ಕಾರಣಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಕುರಿತು ಹೈಕಮಂಡ್ ಸಮಾಲೋಚನೆ ನಡೆಸುತ್ತಿದೆ..ಒಂದು ಮೂಲದ ಪ್ರಕಾರ ವಿಜಯೇಂದ್ರ ಅವರನ್ನು ಬದಲಾಯಿಸಲಾಗುತ್ತಿದೆ ಎನ್ನಲಾಗುತ್ತದೆ.

Girl in a jacket
error: Content is protected !!