ವಸತಿ ಯೋಜನೆಗಳಲ್ಲಿ ಶೇ. 15 ಮೀಸಲಾತಿ- ಕೇಂದ್ರದ ಮಾದರಿ ಅನುಸರಿಸಿದ್ದೇವೆ – ಜಮೀರ್

Share

ಬೆಂಗಳೂರು,ಜೂ,20– ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ

ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ.
ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ.

2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ. 10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು.
2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ. 15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು.
ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷ ಗಳು ಅನಗತ್ಯ ಟೀಕೆ ಗಳು ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

Girl in a jacket
error: Content is protected !!