ಬೆಂಗಳೂರು,ಅ,23: ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ ಎಂಬ ವಿಎಚ್‌ಪಿ ಮುಖಂಡರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಡಿಸಿದೆ.
ತುಮಕೂರಿನಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ನ ರಾಜ್ಯ ಸಂಚಾಲಕ ಬಸವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಟ್ವಿಟರ್‌ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.ಮುಖ್ಯಮಂತ್ರಿಗಳ ‘ಆಕ್ಷನ್’ಗೆ ಬಿಜೆಪಿಯ ಸಮಾಜಘಾತುಕ ಪಡೆಯ ‘ರಿಯಾಕ್ಷನ್’ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
‘ಸರ್ಕಾರಕ್ಕೆ ಈ ಸಮಾಜ ವಿರೋಧಿ ಸಂಘಟನೆಗಳ ನಿಯಂತ್ರಣ ಸಾಧ್ಯವಿಲ್ಲವೇ ಅಥವಾ ಸರ್ಕಾರವೇ ಇವರ ಬೆಂಬಲಕ್ಕೆ ನಿಂತಿದೆಯೇ ಎಂದು ಸಿಎಂ ಸ್ಪಷ್ಟಪಡಿಸಬೇಕು’ ಎಂದೂ ಒತ್ತಾಯಿಸಿದೆ.ರಾಮರಾಜ್ಯ ಎಂದು ಬೊಗಳೆ ಬಿಡುವ ಬಿಜೆಪಿ ಆಡಳಿತದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲವೇ? ಎಂದು ಕೆಪಿಸಿಸಿ ಪ್ರಶ್ನಿಸಿದೆ.