೨೬ ಕ್ಕೆ ಬಿಜೆಪಿ ಶಾಸಕಾಂಗ ಸಭೆ-ಬಿಎಸ್‌ವೈ

Share

ಬೆಂಗಳೂರು,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಾಸಕಾಂಗ ಸಭೆ ಕರೆಯುವ ಮೂಲಕ ವಿಶೇಷ ಕುತೂಹಲ ಮೂಡಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಇಂದು ಸಂಚೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ತಮ್ಮ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ೨೬ ರಂದು ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
‘ನಾಯಕತ್ವ ಬದಲಾವಣೆ ಅಥವಾ ಪರ್ಯಾಯ ನಾಯಕತ್ವದ ಕುರಿತು ನನ್ನ ಜತೆ ಯಾರೂ ಈವರೆಗೆ ಚರ್ಚಿಸಿಲ್ಲ. ನಾನು ಮುಖ್ಯಮಂತ್ರಿಯಾಗಿ ಜುಲೈ ೨೬ಕ್ಕೆ ಎರಡು ವರ್ಷ ತುಂಬುತ್ತಿದೆ. ಅದೇ ದಿನ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ’ ಎಂದರು.
ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂಬುದು ವರಿಷ್ಠರ ಬಯಕೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಲಾಗುವುದು. ಪಕ್ಷ ಸಂಘಟನೆಯ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು. ‘ದೆಹಲಿ ಭೇಟಿ ಯಶಸ್ವಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂಧ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿ ಬಂದಿದ್ದೇನೆ. ಜನಪರವಾಗಿ ಕೆಲಸ ಮಾಡಿಕೊಂಡು ಹೋಗುವಂತೆ ಎಲ್ಲರೂ ಸೂಚಿಸಿದ್ದಾರೆ’ ಎಂದರು

Girl in a jacket
error: Content is protected !!