ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ

Share

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ

by-ಕೆಂಧೂಳಿ

ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇದ್ರ ನೇತೃತ್ವದಲ್ಲಿ ಬೆಂಗಳೂರು ಶಾಸಕರು ಸಂಸದರ ನಿಯೋಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು.

ಬೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇದ್ರ ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು ಒತ್ತು ಕೊಡಬೇಕೆಂದು ಕೋರಿರುವುದಾಗಿ ವಿವರಿಸಿದರು.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಅವರು, ಮೆಟ್ರೋ ಪ್ರಯಾಣ ದರ ಜಾಸ್ತಿ ಆಗಿದ್ದು ಅದನ್ನು ಕಡಿಮೆ ಮಾಡುವ ಕುರಿತಂತೆ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು. ಅಭಿವೃದ್ಧಿಗೆ ಅನುದಾನ ಮಾತ್ರವಲ್ಲದೆ, ಮೊದಲ ಬಾರಿ ಗೆದ್ದ ಶಾಸಕರಿಗೆ ಅನುದಾನ ಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ ಎಂದರು.
ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಪ್ರತಿಸಾರಿಯೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಸಂಬಂಧಿಸಿ ಬಿಬಿಎಂಪಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದು ಆಕ್ಷೇಪಿಸಿದರು. ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲು ಒತ್ತಾಯಿಸಲಾಗಿದೆ ಎಂದರು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಇತಿಮಿತಿಯೊಳಗೆ ಎಷ್ಟು ಅನುದಾನ ಕೊಡಲು ಸಾಧ್ಯವೋ ಆ ಕಡೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಯಾವತ್ತೂ ಬೆಂಗಳೂರು ನಗರಕ್ಕೆ ಇಂಥ ದುಸ್ಥಿತಿ ಬಂದಿರಲಿಲ್ಲ; ಪ್ರತಿ ಬಜೆಟ್‍ನಲ್ಲೂ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಆರರಿಂದ 8 ಸಾವಿರ ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ನೀಡುತ್ತಿದ್ದರು. ಯಡಿಯೂರಪ್ಪನವರು ಹಿಂದೆ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಶಾಸಕರಿಗೂ ಹೆಚ್ಚಿನ ಅನುದಾನ ನೀಡಿದ್ದರು. ಕರ್ನಾಟಕವನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಕ ನೋಡುತ್ತಾರೆ ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರಿನ ಹೆಸರಿನಲ್ಲಿ ಬಿಬಿಎಂಪಿ ಚುನಾವಣೆ ಮುಂದೂಡಬಾರದು ಎಂಬ ಕುರಿತು ನಾವು ಸದನದಲ್ಲೂ ಚರ್ಚೆ ಮಾಡುತ್ತೇವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅವೈಜ್ಞಾನಿಕ ಟನೆಲ್ ರಸ್ತೆ ಕುರಿತು ಕೂಡ ಸದನದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ, ಕಾಮಗಾರಿಗಳು ಆರಂಭವಾಗದೆ ಇರುವುದು, ಪಾರ್ಕಿನ ವಾಚ್‍ಮೆನ್‍ಗೆ ಹಣ ಕೊಡಲೂ ಸಾಧ್ಯ ಆಗದೆ ಇರುವುದನ್ನು ನೋಡಿ, ಎರಡು ವರ್ಷ ಕಾದು ವಿಧಿಯಿಲ್ಲದೆ ಸಿಎಂ ಭೇಟಿ ಮಾಡಿದ್ದೇವೆ. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾದ ಕುರಿತು ಗಮನ ಸೆಳೆದಿದ್ದೇವೆ ಎಂದರು.
ಒಂದೆಡೆ ಬೆಲೆ ಏರಿಕೆ, ಇನ್ನೊಂದೆಡೆ ಅಭಿವೃದ್ಧಿಯೂ ಕುಂಠಿತವಾಗಿದೆ ಎಂದ ಅವರು, ಬೆಂಗಳೂರಿಗೆ ಅನುದಾನ ಕೊಡಿ; ರಾಜ್ಯದ ಎಲ್ಲ ಬಿಜೆಪಿ ಶಾಸಕರಿಗೆ ಅನುದಾನ ಕೊಡಿ ಎಂದು ಕೇಳಿದ್ದೇವೆ. ವಿಪಕ್ಷಗಳಿಗೆ ಅನ್ಯಾಯ ಮಾಡದಿರಿ; ರಾಜ್ಯದ ಸಮಗ್ರ ಬೆಳವಣಿಗೆಗೆ ಅನುದಾನ ನೀಡಿ ಎಂದು ಕೇಳಿದ್ದಾಗಿ ವಿವರಿಸಿದರು.
ಹಿಂದೆ ನಮ್ಮ ಸರಕಾರ ಸಿದ್ದರಾಮಯ್ಯನವರಿಗೆ ವರ್ಷಕ್ಕೆ 100 ಕೋಟಿ ಅನುದಾನವನ್ನು ಕೊಟ್ಟಿತ್ತು ಎಂದು ಗಮನ ಸೆಳೆದರು. ಈಗ ಪ್ರತಿ ಕ್ಷೇತ್ರಕ್ಕೆ 120ರಿಂದ 150 ಕೋಟಿ ಕೊಡಲು ಕೇಳಿದ್ದಾಗಿ ತಿಳಿಸಿದರು.

Girl in a jacket
error: Content is protected !!