ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ
by-ಕೆಂಧೂಳಿ
ಬೆಂಗಳೂರು,ಮಾ,೦೨- ನಾಳೆಯಿಂದ(ಸೋಮವಾರ) ವಿಧಾಮಂಡಲ ಅಧಿವೇಶನ ಆರಂಬವಾಗಲಿದ್ದು ಈ ಬಾರಿ ಪ್ರತಿಪಕ್ಷಗಳಿಗೆ ಸರ್ಕಾರವನ್ನು ತರಾಟೆಗೆ ತಗೆದುಕೊಳ್ಳಲು ಸಾಕಷ್ಟು ವಿಷಯಗಳಿಗೆ ಈ ವಿಷಯಗಳ ಮೇಲೆ ತೀವ್ರ ಚಚೆ ವಾಗ್ವಾದಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ.
ಇದು ಬಜೆಟ್ ಅಧಿವೇಶನವಾಗಿರುವುದರಿಂದ ೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಲಿದ್ದಾರೆ ಅದಕ್ಕಿಂತಲೂ ಮುನ್ನ ನಡೆಯುವ ಈ ವಿಷಯಗಳ ಮೇಲಿನ ಚರ್ಚೆಗಳು ತೀವ್ರ ವಾದ-ವಾಗ್ವಾದಗಳಿಗೆ ವೇದಿಕೆಯಾಗಲಿದೆ.
ಅಧಿವೇಶನಕ್ಕೂ ಮುನ್ನ ಈ ಗುತ್ತಿಗೆದಾರರು ಕೂಡ ಈಗ ಕಮಿಷನ್ ಸರ್ಕಾರ ಅಂತ ಆರೋಪ ಬೇರೆ ಮಾಡಿದೆ ಇದು ಸೇರಿದಂತೆಗ್ಯಾರಂಟಿ ಹಣಬಿಡುಗಡೆ ವಿಳಂಬ,ಕಾಮಗಾರಿಗಳಿಗೆ ಅನುದಾನ ಕೊರೆತೆ,ಕೆಪಿಎಸ್ಸಿಸಿ ಹಗರಣ,ಬಸ್,ಮೆಟ್ರೋ ದರ ಏರಿಕೆ ,ಇವೆಲ್ಲದಕ್ಕಿಂತಲೂ ವಿವಿಗಳ ಮುಚ್ಚುವ ಸರ್ಕಾರದ ನಿರ್ಧಾರಗಳ ಕುರಿತು ಪ್ರತಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳುವ ಎಲ್ಲಾ ಲಕ್ಷಣಗಳು ಇವೆ
ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಭಾಷಣ ಮಾಡಲಿದ್ದಾರೆ. ವಿವಿಧ ವಿಧೇಯಕಗಳ ಬಗ್ಗೆ ಸರ್ಕಾರದ ಧೋರಣೆ ಖಂಡಿಸಿ ಪತ್ರ ಬರೆದಿರುವ ರಾಜ್ಯಪಾಲರು ಅಧಿವೇಶನದಲ್ಲಿ ಸರ್ಕಾರದ ಬಗ್ಗೆ ಯಾವ ರೀತಿ ಮಾತನಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮಾ.೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ೧೬ನೇ ಬಜೆಟ್ ಮಂಡನೆ ಮಾಡಲಿದ್ದು, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.
ಮಾ. ೨೧ರವರೆಗೆ ನಡೆಯುವ ಅಧಿವೇಶನದ ಉದ್ದಕ್ಕೂ ಬಸ್ಸು, ಮೆಟ್ರೋ ದರ ಏರಿಕೆ, ವಿದ್ಯುತ್, ನೀರು, ಹಾಲಿನ ದರ ಏರಿಕೆ ಪ್ರಸ್ತಾಪ ಸೇರಿ ಮೈಕ್ರೋ ಫೈನಾನ್ಸ್ ಕಿರುಕುಳ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ರಾಜ್ಯಪಾಲ-ಸರ್ಕಾರದ ನಡುವಿನ ಜಟಾಪಟಿ, ಬೆಂಗಳೂರು ನಗರದ ಸಮಸ್ಯೆಗಳನ್ನು ಮುಖ್ಯ ಅಸ್ತ್ರವಾಗಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಜ್ಜಾಗಿವೆ.
ಇದಕ್ಕೆ ಪ್ರತಿಯಾಗಿ ಕುನ್ಹಾ ವರದಿ, ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ, ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಅಂಗೀಕಾರ ನೀಡಲು ಸ್ಪಂದಿಸದ ಕೇಂದ್ರ ಸರ್ಕಾರದ ಧೋರಣೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ, ತೆರಿಗೆ ಪಾಲು ಕಡಿತ ಮತ್ತಿತರ ಅಂಕಿ-ಅಂಶಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಿರುದ್ಧ ಹರಿಹಾಯಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ. ಈ ಬಗ್ಗೆ ಮಾ.೪ ರಂದು ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಏರ್ಪಡಿಸಿದ್ದು, ಈ ವೇಳೆ ಮತ್ತಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ ಪಕ್ಷದ ಸಭೆ ಕರೆಯಲಾಗಿದೆ.

Advatisement