ಅಕ್ರಮ ಗಣಿಗಾರಿಕೆ ಪ್ರಕರಣ; ಜನಾರ್ದನರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

Share

ನವದೆಹಲಿ, ಮೇ8-ಅಕ್ರಮ ಗಣಿಗಾರಿಕೆ ಪ್ರಕರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಬಿಎಸ್ ಯಡಿಯೂರಪ್ಪ ಆಡಳಿತದಲ್ಲಿ ಈ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಓಎಂಸಿ ಕಂಪನಿಯ ಎಂಡಿಯಾಗಿದ್ದರು.

ಈ ಕಂಪನಿಗೆ ಗಣಿಗಾರಿ ಮಂಜೂರಾತಿ ನೀಡುವಲ್ಲಿ ಅಕ್ರಮ ನಡೆದಿತ್ತು. ಅರಣ್ಯ ಇಲಾಖೆ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಮಾಜಿ ಸಚಿವ ಜನಾರ್ಧನರೆಡ್ಡಿ ಅಪರಾಧಿ ಎಂದು ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು ಇದೀಗ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗಿದ್ದಾರೆ.

ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು ಅಲಿ ಖಾನ್‌ಗೆ ಕೋರ್ಟ್‌ ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್‌ ಕ್ಲೀನ್‌ ಚಿಟ್‌ ನೀಡಿದೆ.

Girl in a jacket
error: Content is protected !!