ಇಂದಿನಿಂದ ರಾಜ್ಯಾದ್ಯಂತ ಅನ್ ಲಾಕ್

Share

ಬೆಂಗಳೂರು,05: ರಾಜ್ಯದಲ್ಲಿ ಕೊರೊನಾ ಕೊಂಚ ರಿಲೀಫ್​ ನೀಡಿದ್ದ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ನಿಯಮಗಳನ್ನು ಜಾರಿಗೆ ತಂದಿತ್ತು. ಇದೀಗ ಜುಲೈ 5 ರಿಂದ ಅನ್​ಲಾಕ್​ 3.0 ಮಾಡಲು ಹೊರಟಿರುವ ಸರ್ಕಾರ ಕೆಲವು ನಿರ್ಭಂದಗಳೊಂದಿಗೆ ಅನ್​ಲಾಕ್​ ಘೋಷಣೆ ಮಾಡಿದೆ.
ಅದರಂತೆ ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿವೆ.
ಈ ಅವಕಾಶ ಅಥವಾ ಅನುಮತಿ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ ಹೆಚ್ಚಾದ್ದಲ್ಲಿ ಮತ್ತೆ ಹಿಂದಿನ ನಿರ್ಬಂಧಗಳು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ಬರಲಿವೆ.

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೋಮವಾರ (ಜುಲೈ 05)ದ ಬೆಳಿಗ್ಗೆ 5 ಗಂಟೆಯಿಂದ (ಜುಲೈ19) ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಒಂದಷ್ಟು ಸಡಿಲಿಕೆಗಳು ಹಾಗೂ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕೆ ಅವಕಾಶವಿಲ್ಲ?

ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟುಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

Girl in a jacket
error: Content is protected !!