ಕಲಬುರಗಿ,ಡಿ.೨೧- ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರ ಅಟ್ಟಹಾಸ ಮುಂದುವರೆದಿದ್ದು, ಕಲ್ಯಾಣ ಕರ್ನಾಟಕದ ಸಾರಿಗೆ ಬಸ್ ತಡೆದು, ಕಪ್ಪು ಮಸಿ ಬಳಿದು ಕಿಡಿಗೇಡಿಗಳು ಮತ್ತೆ ಉದ್ಧಟತನ ಮೆರೆದಿದ್ದಾರೆ.
ಮುಂಬೈನಿಂದ ಕಲಬುರಗಿಗೆ ಬರುತ್ತಿದ್ದ ಸಾರಿಗೆ ಬಸ್ ತಡೆದ ಎಂಇಎಸ್ ಕಿಡಿಗೇಡಿಗಳು, ಬಸ್ ಮೇಲೆ ಜೈ ಶಿವಾಜಿ ಎಂದು ಬರೆದಿದ್ದಾರೆ. ಬಸ್ ಮುಂಭಾಗದಲ್ಲಿ ಎಂಇಎಸ್ ಧ್ವಜ ಕಟ್ಟಿ ಬಸಗೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಚಾಲಕನ ಕೈಗೆ ಎಂಇಎಸ್ ಧ್ವಜ ನೀಡಿ ಜೈ ಶಿವಾಜಿ ಎಂದು ಘೋಷಣೆ ಕೂಗುವಂತೆ ಬಲವಂತ ಮಾಡಿದ್ದಾರೆ.
ಈ ಪುಂಡಾಟಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಂಇಎಸ್ ಕಾರ್ಯಕರ್ತರ ವಿಕೃತಿ ಕನ್ನಡಿಗರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಎಂಇಎಸ್ ಕಿಡಿಗೇಡಿಗಳ ವಿರುದ್ಧ ತಕ್ಷಣ ಕಾನೂನು ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದ್ದಾರೆ.
ಎಂಇಎಸ್ ಪುಂಡರಿಂದ ಮತ್ತೇ ಉದ್ಧಟತನ
Share